ರಾಜೀವ್ ಗೌಡ ವಿರುದ್ಧ ಮತ್ತೊಂದು ಆರೋಪ.

ರಾಜೀವ್ ಗೌಡ ವಿರುದ್ಧ ಮತ್ತೊಂದು ಆರೋಪ.

ಶಿಡ್ಲಘಟ್ಟ ತಹಶೀಲ್ದಾರ್‌ಗೆ ನಿಂದನೆ ನೀಡಿದ ಆರೋಪ.

ಚಿಕ್ಕಬಳ್ಳಾಪುರ: ಶಿಡ್ಲಘಟ್ಟನಗರಸಭೆಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಕಾಂಗ್ರೆಸ್​​ ಮುಖಂಡ ರಾಜೀವ್ ಗೌಡ ವಿರುದ್ಧ ಇಂತಹುದ್ದೇ ಮತ್ತೊಂದು ಆರೋಪ ಕೇಳಿಬಂದಿದೆ. ಶಿಡ್ಲಘಟ್ಟ ತಹಶೀಲ್ದಾರ್ ಗಗನಸಿಂಧು ಅವರಿಗೂ ಏಕವಚನದಲ್ಲಿ ನಿಂದಿಸಿದ್ದ ಎನ್ನಲಾಗಿದ್ದು, ಆದರೆ ತಾನು ಆಡಿಯೋ ರೆಕಾರ್ಡ್​​ ಮಾಡಿಕೊಂಡಿಲ್ಲ ಎಂದವರು ತಿಳಿಸಿದ್ದಾರೆ. ಈ ಬಗ್ಗೆ ನಗರಸಭೆ ಆಯುಕ್ತೆ ಅಮೃತಾ, ಸ್ಥಳೀಯ ಶಾಸಕ ಬಿ.ಎನ್. ರವಿಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಬಳಿ ಅವರು ಅಳಲು ತೋಡಿಕೊಂಡಿದ್ದಾರೆ.

ಆರೋಪಿಗಾಗಿ 3 ತಂಡಗಳಿಂದ ಹುಡುಕಾಟ

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ವಿಚಾರವಾಗಿ ತಲೆಮರೆಸಿಕೊಂಡಿರುವ ರಾಜೀವ್​ಗೌಡಗೆ 3 ತಂಡಗಳಿಂದ ಹುಡುಕಾಟ ನಡೆಸಲಾಗುತ್ತಿದೆ. ಶಿಡ್ಲಘಟ್ಟ ಠಾಣೆಯ ಸರ್ಕಲ್ ಇನ್ಸ್​ಪೆಕ್ಟರ್ ಆನಂದಕುಮಾರ್, ಚಿಂತಾಮಣಿ ಗ್ರಾಮಾಂತರ ಠಾಣೆಯ ಇನ್ಸ್​ಪೆಕ್ಟರ್​ ಶಿವರಾಜ್ ಮತ್ತು ಸೈಬರ್ ಪೊಲೀಸ್ ಠಾಣೆ ಪಿಐ ಸೂರ್ಯಪ್ರಕಾಶ್ ನೇತೃತ್ವದಲ್ಲಿ ಶೋಧ ನಡೆಯುತ್ತಿದೆ. ಬಂಧನ ಭೀತಿಯಿಂದ ನಿನ್ನೆ ರಾತ್ರಿ ರಾಜೀವ್ ಗೌಡ ಪರಾರಿಯಾಗಿದ್ದು, ಆತನ 2 ಮೊಬೈಲ್​ಗಳು ಕೂಡ​ ಸ್ವಿಚ್​ಆಫ್ ಆಗಿವೆ. ಹೀಗಾಗಿ ಬೆಂಗಳೂರಿನ ಇಂದಿರಾನಗರದಲ್ಲಿ 1 ತಂಡ, ಸಂಜಯ್ ನಗರದಲ್ಲಿ 1 ತಂಡ ಮತ್ತು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಒಂದು ತಂಡದಿಂದ ಆರೋಪಿಗೆ ಹುಡುಕಾಟ ನಡೆಯುತ್ತಿದೆ. ಮತ್ತೊಂದೆಡೆ ರಾಜೀವ್ ಗೌಡನನ್ನು ಬಂಧಿಸದಿದ್ರೆ ಶಿಡ್ಲಘಟ್ಟ ಬಂದ್ ಮಾಡುವುದಾಗಿ ಎನ್​​ಡಿಎ ಮುಖಂಡರು ಪೊಲೀಸರಿಗೆ ಎಚ್ಚರಿಕೆ ಕೂಡ ನೀಡಿರುವ ಕಾರಣ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *