ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಈರುಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ, ಶತಕದತ್ತ ದಾಪುಗಾಲು!

ಕೆ.ಜಿ.ಗೆ 80 ರೂ.ಗಳನ್ನು ದಾಟಿದ ಈರುಳ್ಳಿ ಬೆಲೆ: 5 ವರ್ಷಗಳಲ್ಲೇ ಗರಿಷ್ಠ ಮಟ್ಟ

Image of onion in market

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಇದೀಗ ಈರುಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ.

ಹೌದು, ರಾಜ್ಯದಲ್ಲಿ ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ನೀರುಪಾಲಾಗಿದ್ದು, ಮಳೆಯಿಂದ ರಕ್ಷಿಸಿದ ಈರುಳ್ಳಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ.

ಹೀಗಾಗಿ ದರ ಏರಿಕೆಯಾಗಿದೆ. ಕೆಜಿಗೆ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗಾ 60 ರಿಂದ 80 ರೂಪಾಯಿ ವರೆಗೆ ಮಾರಾಟ ಮಾಡಲಾಗುತ್ತಿದೆ.

ಕಳೆದ ಮೂರು ತಿಂಗಳಿನಿಂದ ಈರುಳ್ಳಿಯ ಬೆಲೆ ಏರಿಕೆಯಾಗುತ್ತಲೇ ಇದೆ. ಮಳೆ ಇಲ್ಲದಿದ್ದರೂ ಬೆಲೆ 70 ರ ಗಡಿ ದಾಟಿದೆ. ಕಳೆದ ತಿಂಗಳು ಸುರಿದ ಭಾರಿ ಮಳೆಯ ಪರಿಣಾಮ ನಿರೀಕ್ಷೆಯಷ್ಟು ಈರುಳ್ಳಿ ಮಾರುಕಟ್ಟೆಗೆ ಬಂದಿಲ್ಲ.ಹಾಗೂ ಹೊರ ರಾಜ್ಯಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಈರುಳ್ಳಿ ಪೂರೈಕೆಯಾಗುತ್ತಿಲ್ಲ ಈ ಹಿನ್ನೆಲೆಯಲ್ಲಿ ಈರುಳ್ಳಿ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ.

ಬೇಡಿಕೆ ಗಣನೀವಾಗಿ ಹೆಚ್ಚಾದ ಪರಿಣಾಮವಾಗಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಶೀಘ್ರವೇ ಈರುಳ್ಳಿ ಬೆಲೆ ಕೆಜಿಗೆ 100 ರೂ. ಗಡಿ ದಾಟುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *