ಬೆಂಗಳೂರು : ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಆರ್ ಆರ್ ನಗರದ ಕ್ಷೇತ್ರದ ಕಾಮಗಾರಿಗಳ ತನಿಖೆಗೆ ಆದೇಶ ಹೊರಡಿಸಲಾಗಿದೆ.
ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಬಿಬಿಎಂಪಿ ಕಂದಾಯ ವಿಭಾಗದ ಅಧಿಕಾರಿ ಮೌನೀಷ್ ಮದ್ಗಿಲ್ ನೇತೃತ್ವದಲ್ಲಿ ಸಮಿತಿ ರಚಿಸಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಬೆಂಗಳೂೃಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮುನಿರತ್ನ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.ಅಕ್ಟೋಬರ್ 5ರವರೆಗೆ ನ್ಯಾಯಾಲಯ ಎಸ್ಐಟಿ ಕಸ್ಟಡಿಗೆ ಮುನಿರತ್ನ ಅವರನ್ನು ನೀಡಿ ಆದೇಶಿಸಿತ್ತು.