ಅತಿವೇಗ ಚಾಲನೆಗೆ ಮತ್ತೊಂದು ಬಲಿ: ಪತಿ ಮೃತ, ಪತ್ನಿ-ಮಗಳು ಗಂಭೀರವಾಗಿ ಗಾಯ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಅತಿವೇಗ ಹಾಗೂ ಅಜಾಗರೂಕ ಚಾಲನೆಗೆ ಮತ್ತೊಂದು ಬಲಿಯಾಗಿದೆ. ನಗರದ ಹೊರವಲಯದ ಚಿಕ್ಕಜಾಲ ಬಳಿ ನಡೆದ ಭೀಕರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿ ಮತ್ತು ಮಗಳು ತೀವ್ರವಾಗಿ ಗಾಯಗೊಂಡಿದ್ದಾರೆ.
ಮೃತ ವ್ಯಕ್ತಿಯನ್ನು 40 ವರ್ಷದ ಮಹೇಶ್ ಎಂದು ಗುರುತಿಸಲಾಗಿದೆ. ಮಹೇಶ್ ಅವರು ತಮ್ಮ ಪತ್ನಿ ಮತ್ತು ಪುತ್ರಿಯೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ, ವೇಗವಾಗಿ ಬಂದ ಅಪರಿಚಿತ ಕಾರೊಂದು ಇವರ ದ್ವಿಚಕ್ರ ವಾಹನಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಹೇಶ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮಹೇಶ್ ಅವರ ಪತ್ನಿ ಹಾಗೂ ಪುತ್ರಿಗೂ ಪೆಟ್ಟಾಗಿದ್ದು, ಸದ್ಯ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕ್ಕಜಾಲ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
For More Updates Join our WhatsApp Group :




