2024- 25 ನೇ ಸಾಲಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಂದ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈಗಾಗಲೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೀಸಲಿಟ್ಟ ಆಯವ್ಯಯಕ್ಕೆ ಅನುಗುಣವಾಗಿ ಮಂಡಳಿಯ ನಿರ್ಣಯದಂತೆ ಅರ್ಹ ಫಲಾನುಭವಿಗಳಿಗೆ ಶೈಕ್ಷಣಿಕ ಸಹಾಯಧನ ವಿತರಿಸಲಾಗುವುದು.
ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ
