ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 344 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಹುದ್ದೆ ವಿವರ: 81 ಅಂಗನವಾಡಿ ಕಾರ್ಯಕರ್ತರು ಮತ್ತು 263 ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಯಾವ ತಾಲೂಕಿನಲ್ಲಿ ಎಷ್ಟು ಹುದ್ದೆ ಎಂಬ ಮಾಹಿತಿ ಇಲ್ಲಿದೆ.
ತಾಲೂಕು | ಅಂಗನಾಡಿ ಕಾರ್ಯಕರ್ತೆಯರು | ಅಂಗನವಾಡಿ ಸಹಾಯಕರು |
ಅಂಕೋಲಾ | 3 | 17 |
ಭಟ್ಕಳ | 7 | 15 |
ಹಳಿಯಾಳ | 12 | 20 |
ದಾಂಡೇಲಿ | 4 | 12 |
ಹೊನ್ನಾವಾರ | 4 | 29 |
ಜೋಯಿಡಾ | 28 | |
ಕಾರವಾರ | 2 | 6 |
ಕುಮಟಾ | 3 | 30 |
ಮುಂಡಗೋಡ | 10 | 29 |
ಸಿದ್ದಾಪುರ | 7 | 17 |
ಶಿರಸಿ | 24 | 55 |
ಯಲ್ಲಾಪುರ | 5 | 15 |
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು.
ಅಂಗನಾಡಿ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 19 ರಿಂದ 35 ವರ್ಷದ ವಯೋಮಿತಿ ಹೊಂದಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆ ಪರಿಶೀಲಿಸಿ ಆನ್ಲೈನ್ ಮೂಲಕ ಅರ್ಜಿ ಭರ್ತಿಗೆ ಮುಂದಾಗುವಂತೆ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಅಭ್ಯರ್ಥಿಗಳು ಆಗಸ್ಟ್ 12ರೊಳಗೆ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಅಭ್ಯರ್ಥಿಗಳು ಈ ಜಾಲತಾಣದ http://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ