ಹೈಟೆಕ್ ಹಾರ್ವೆಸ್ಟರ್ ಹಬ್ಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಹೈಟೆಕ್ ಹಾರ್ವೇಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡಲು ಪ್ರತಿ ಘಟಕಕ್ಕೆ ಒದಗಿಸುವ ಅನುದಾನದಲ್ಲಿ ಶೇ.40 ರಿಂದ ಶೆ.70 ರಷ್ಟು ಸಹಾಯಧನ ಒದಗಿಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಕೃಷಿ ಇಲಾಖೆಯು ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಸ್ಥಾಪಿಸಲಾಗಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ಗಳನ್ನು ಹಂತಹಂತವಾಗಿ ಅನುಷ್ಟಾನ ಮಾಡಲು ಉದ್ದೇಶಿಸಲಾಗಿದ್ದು, ಈ ಕಾರ್ಯಕ್ರಮವನ್ನು ಕೃಷಿ ಯಂತ್ರಧಾರೆ ಕೇಂದ್ರಗಳೊಂದಿಗೆ ಇತರೆ ಸಂಘ-ಸಂಸ್ಥೆಗಳು ಹಾಗೂ ವೈಯುಕ್ತಿಕ ಫಲಾನುಭವಿಗಳಿಗೂ ಸಹ ಹೈಟೆಕ್ ಹಾರ್ವೇಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡಲು ಪ್ರತಿ ಘಟಕಕ್ಕೆ ಒದಗಿಸುವ ಅನುದಾನದಲ್ಲಿ ಶೇ.40 ರಿಂದ ಶೆ.70 ರಷ್ಟು ಸಹಾಯಧನ ಒದಗಿಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅರ್ಜಿಯನ್ನು ಕೃಷಿ ಇಲಾಖೆ/ ಉಪ ಕೃಷಿ ನಿರ್ದೇಶಕರ ಕಚೇರಿ/ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆ.14ರೊಳಗಾಗಿ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆ/ ಉಪ ಕೃಷಿ ನಿರ್ದೇಶಕರಕಚೇರಿ/ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *