ತುಮಕೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

ತುಮಕೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

ತುಮಕೂರು : ಜಿಲ್ಲಾಡಳಿತದ ವತಿಯಿಂದ 2024-25ನೇ ಸಾಲಿನ ನವೆಂಬರ್ 1 ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಹನೀಯರಿಗೆ “ತುಮಕೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಗೌರವ ಸನ್ಮಾನ” ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ತಮ್ಮ ಅರ್ಜಿಯನ್ನು ಸ್ವವಿವರಗಳೊಂದಿಗೆ ಅಕ್ಟೋಬರ್ 24 ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಹತ್ತಿರ, ತುಮಕೂರು ಇವರಿಗೆ ಸಲ್ಲಿಸಬೇಕು.           ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816-2275204ನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *