ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ನೇಮಕಾತಿ ಕರೆಯಲಾಗಿದ್ದ ಅರ್ಜಿ ಆಹ್ವಾನದ ದಿನಾಂಕವನ್ನು ಮತ್ತೊಂದು ಬಾರಿ ವಿಸ್ತರಣೆ ಮಾಡಿ ಕರ್ನಾಟಕ ಲೋಕ ಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಮೇ 30ರಿಂದ ಈ ಹುದ್ದೆಗೆ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಆರಂಭ ಆಗಲಿದ್ದು, ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ಜೂನ್ 30 ಆಗಿದೆ.
ಹುದ್ದೆ ವಿವರ: ಒಟ್ಟು 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಲ್ಲಿ ಆರು ಹುದ್ದೆಗಳನ್ನು ಕಲ್ಯಾಣ - ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಆಟೋ ಮೊಬೈಲ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ನಲ್ಲಿ ಬಿಟೆಕ್ ಅಥವಾ ಡಿಪ್ಲೊಮಾ ಪದವಿ ಪೂರ್ಣಗೊಳಿಸಿರಬೇಕು.
ವೇತನ: 33,450 – 62,600 ರೂ. ಮಾಸಿಕ
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಟ ವಯೋಮಿತಿ 35 ವರ್ಷ. ಪ. ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ವಿಶೇಷಚೇತನ, ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ. ಜಾ, ಪ. ಪಂ, ಪ್ರವರ್ಗ 1 ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಮಾಡಲಾಗಿದೆ. ನಿವೃತ್ತ ಸೇವಾ ನೌಕರರಿಗೆ 50 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನಡೆಯಲಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kpsc.kar.nic.in ಇಲ್ಲಿಗೆ ಭೇಟಿ ನೀಡಿ.