ಮೋಟಾರ್​ ವಾಹನ ನಿರೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ನಿಗದಿ

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ 76 ಮೋಟಾರು ವಾಹನ ನಿರೀಕ್ಷಕರ ​​ಹುದ್ದೆಗಳ ನೇಮಕಾತಿ ಕರೆಯಲಾಗಿದ್ದ ಅರ್ಜಿ ಆಹ್ವಾನದ ದಿನಾಂಕವನ್ನು ಮತ್ತೊಂದು ಬಾರಿ ವಿಸ್ತರಣೆ ಮಾಡಿ ಕರ್ನಾಟಕ ಲೋಕ ಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಮೇ 30ರಿಂದ ಈ ಹುದ್ದೆಗೆ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಆರಂಭ ಆಗಲಿದ್ದು, ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ಜೂನ್​ 30 ಆಗಿದೆ.

ಹುದ್ದೆ ವಿವರ: ಒಟ್ಟು 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಲ್ಲಿ ಆರು ಹುದ್ದೆಗಳನ್ನು ಕಲ್ಯಾಣ ​ ​- ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಆಟೋ ಮೊಬೈಲ್​ ಮತ್ತು ಮೆಕಾನಿಕಲ್​ ಇಂಜಿನಿಯರಿಂಗ್​ನಲ್ಲಿ ಬಿಟೆಕ್​ ಅಥವಾ ಡಿಪ್ಲೊಮಾ ಪದವಿ ಪೂರ್ಣಗೊಳಿಸಿರಬೇಕು.

ವೇತನ: 33,450 – 62,600 ರೂ. ಮಾಸಿಕ

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಟ ವಯೋಮಿತಿ 35 ವರ್ಷ. ಪ. ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ವಿಶೇಷಚೇತನ, ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ. ಜಾ, ಪ. ಪಂ, ಪ್ರವರ್ಗ 1 ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಮಾಡಲಾಗಿದೆ. ನಿವೃತ್ತ ಸೇವಾ ನೌಕರರಿಗೆ 50 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನಡೆಯಲಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kpsc.kar.nic.in ಇಲ್ಲಿಗೆ ಭೇಟಿ ನೀಡಿ.

Leave a Reply

Your email address will not be published. Required fields are marked *