ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ: ಹೈಕೋರ್ಟ್ ಮಧ್ಯಂತರ ಆದೇಶ.

ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ: ಹೈಕೋರ್ಟ್ ಮಧ್ಯಂತರ ಆದೇಶ.

ಬೆಂಗಳೂರು: ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯುವವರೆಗೆ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಬೇಡ ಎಂದು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಆ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸದಂತೆ ಹೈಕೋರ್ಟ್ ಪೀಠ  ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್​​​ ಜಾರಿ ಮಾಡಿದೆ.

ಉಡುಪಿ ನಗರಸಭೆ, ಕಡೂರು ಪುರಸಭೆ, ಕೊರಟಗೆರೆ ಪಟ್ಟಣ ಪಂಚಾಯಿತಿ, ನರಸಿಂಹರಾಜಪುರ ಪಟ್ಟಣ ಪಂಚಾಯಿತಿ, ಕೃಷ್ಣರಾಜ ಪೇಟೆ ಪುರಸಭೆ, ಟಿ.ನರಸೀಪುರ ಪುರಸಭೆ ಮತ್ತು ಪಿರಿಯಾಪಟ್ಟಣ ಪುರಸಭೆ ಸದಸ್ಯರಿಂದ ಆಡಳಿತಾಧಿಕಾರಿ ನೇಮಕ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಈ ಎಲ್ಲಾ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿ ಆರ್ . ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಸೋಮವಾರ ವಿಚಾರಣೆ ಮಾಡಿತು. ವಾದ-ಪ್ರತಿವಾದ ಆಲಿಸಿದ ಪೀಠ, ಚುನಾಯಿತ‌ ಸದಸ್ಯರ ಅಧಿಕಾರವಧಿ ಮುಗಿಯುವ ತನಕ ನೇಮಕ ಬೇಡ ಎಂದು ಹೇಳಿದೆ. ಆ ಮೂಲಕ ಆಡಳಿತಾಧಿಕಾರಿಗಳ ನೇಮಕವನ್ನು ತಡೆಹಿಡಿದಿದೆ.

ಇನ್ನು ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸದಂತೆ ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸ್ಥಳೀಯ ಸಂಸ್ಥೆಗಳಿಗೂ ಆಡಳಿತಾಧಿಕಾರಿ ನೇಮಕ ಬೇಡ: ಹೈಕೋರ್ಟ್ ಆದೇಶ

ಇನ್ನು ಇತ್ತೀಚೆಗೆ ಮಂಡ್ಯ, ಕೋಲಾರ, ಹಾಸನ, ಚಿತ್ರದುರ್ಗ, ಗೌರಿಬಿದನೂರು ನಗರಸಣೆ ಅವಧಿ ಪೂರ್ಣವಾಗುವವರೆಗೆ ಆಡಳಿತಾಧಿಕಾರಿ ನೇಮಕ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​​ ಮಧ್ಯಂತರ ನಿರ್ದೇಶನ ನೀಡಿತ್ತು. ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್ . ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ವಿಚಾರಣೆ ಮಾಡಿತು.

ವಾದ-ಪ್ರತಿವಾದ ಆಲಿಸಿದ ಪೀಠ, ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಅವಧಿ ಮುಗಿಯುವ ತನಕ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿತು. ಅಷ್ಟೇ ಅಲ್ಲದೆ ಆಯಾ ಡಿಸಿಗಳಿಗೆ ನೋಟಿಸ್​ ಕೂಡ ಜಾರಿ ಮಾಡಲಾಗಿತ್ತು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *