ಶಿವಮೊಗ್ಗದಲ್ಲಿ ಗಾಳಿ ಗುಣಮಟ್ಟ ಕುಸಿತ
ಬೆಂಗಳೂರು: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಶಿವಮೊಗ್ಗದ AQI ಇಂದು ಕಳಪೆ ಮಟ್ಟ ತಲುಪಿದೆ. ಬೆಂಗಳೂರು, ಮಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಅನಾರೋಗ್ಯಕರ ವಾಯು ಗುಣಮಟ್ಟವಿದ್ದು, ಇಂದಿನ ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರನ್ನೂ ಮೀರಿಸಿದೆ. 200ರ ಗಡಿ ತಲುಪಿರುವ ಶಿವಮೊಗ್ಗದ AQI, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 173ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಶಿವಮೊಗ್ಗದ ಏರ್ ಕ್ವಾಲಿಟಿ 198 ಆಗಿದೆ. ಜೊತೆಗೆ ಬಳ್ಳಾರಿಯ ವಾಯು ಗುಣಮಟ್ಟವೂ ಸಹ 179 ಆಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
- ಬೆಂಗಳೂರು –172
- ಮಂಗಳೂರು-176
- ಮೈಸೂರು –176
- ಬೆಳಗಾವಿ – 169
- ಕಲಬುರ್ಗಿ-136
- ಶಿವಮೊಗ್ಗ – 198
- ಬಳ್ಳಾರಿ – 179
- ಹುಬ್ಬಳ್ಳಿ- 153
- ಉಡುಪಿ –173
- ವಿಜಯಪುರ –150
ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?
- ಉತ್ತಮ- 0-50
- ಮಧ್ಯಮ – 50-100
- ಕಳಪೆ – 100-150
- ಅನಾರೋಗ್ಯಕರ – 150-200
- ಗಂಭೀರ – 200 – 300
- ಅಪಾಯಕಾರಿ – 300 -500+
For More Updates Join our WhatsApp Group :




