ಬೆಂಗಳೂರು: ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಕುರಿತಾಗಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಈ ಸರ್ಕಾರದ ನಡೆ ನೋಡಿದರೆ, ನಾವೇನು ಪಾಕಿಸ್ತಾನದಲ್ಲಿದ್ದೇವಾ ಎಂಬ ಅನುಮಾನ ಮೂಡುತ್ತದೆ. ಕಳೆದ ಎರಡು ವರ್ಷಗಳಿಂದ ಧರ್ಮಸ್ಥಳ, ಚಾಮುಂಡೇಶ್ವರಿ, ಈಗ ಮದ್ದೂರಿನಲ್ಲಿ ಇದೇ ರೀತಿಯ ಘಟನೆಗಳು ನಡೆಯುತ್ತಿವೆ. ಈ ಗಲಭೆಗಳಿಗೆ ನೇರ ಕಾರಣ ಸರ್ಕಾರವೇ” ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಮುಂದುವರಿದು – “ಸಿಎಂ ಸಿದ್ದರಾಮಯ್ಯ ಸುತ್ತಲೂ ಇಂತಹ ಗ್ಯಾಂಗ್‌ಗಳು ತಿರುಗಾಡುತ್ತಿವೆ. ಸರ್ಕಾರದ ಕುಮ್ಮಕ್ಕಿಲ್ಲದೆ ಈ ರೀತಿಯ ಕೃತ್ಯಗಳು ನಡೆಯುವುದೇ ಇಲ್ಲ. ಸಾರ್ವಜನಿಕ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಮಾಡಿದರೆ ತಪ್ಪೇನು? ಆ ರಸ್ತೆ ಇವರಪ್ಪನ ಆಸ್ತಿಯಾ?” ಎಂದು ಗುಡುಗಿದರು. ಮದ್ದೂರಿನ ಘಟನೆ ಬಳಿಕ ಬಿಜೆಪಿ ತೀವ್ರ ಟೀಕೆ ನಡೆಸುತ್ತಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ರಾಜಕೀಯ ಒತ್ತಡ ಹೆಚ್ಚುತ್ತಿದೆ.
For More Updates Join our WhatsApp Group :