ತುಮಕೂರು:- ತುಮಕೂರು ನಗರದ ವಿವಿಧ ಬಡಾವಣೆಗಳಲ್ಲಿ ಅಕ್ರಮವಾಗಿ ಅಮಲು ಬರಿಸುವ ಮಾತ್ರೆಗಳನ್ನು ಯುವ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ದಂಧೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ನಗರದ ಅಬ್ದುಲ್ ಖಾದರ್, ಬೀರೇಶ ಬಂಧಿತ ಆರೋಪಿಗಳು. ಬಂಧಿತರಿಂದ 56 ಸಾವಿರ ಬೆಲೆ ಬಾಳುವ 1700 ಮಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ. ಇತರೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇತ್ತೀಚೆಗೆ ನಗರದಲ್ಲಿ ಅಕ್ರಮವಾಗಿ ಅಮಲು ಬರಿಸುವ ಮಾತ್ರೆಗಳನ್ನು ಯುವಕರಗೆ ಮಾರಾಟ ಮಾಡುತ್ತಿದ್ದಾರೆಂದ ಬಗ್ಗೆ ಜಿಲ್ಲಾ ಪೊಲೀಸ್ ಠಾಣೆಗೆ ದೂರು ಬಂದಿದ್ದವು. ದೂರಿನ ಆಧಾರದ ಮೇಲೆ ಅಕ್ಟೋಬರ್ 31ರಂದು ಸದಾಶಿವನಗರ ಬಡಾವಣೆಯಲ್ಲಿ ಮಾರಾಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದರು. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ