ದೇವರ ಹಕ್ಕಲದಲ್ಲಿ ಉದ್ವಿಗ್ನ ವಾತಾವರಣ.
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರ ಹಕ್ಕಲದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕುಟುಂಬದವರು ಜಾತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಯುವಕನೊಬ್ಬ ದಿನಕರ್ ಎಂಬುವರ ಮನೆಗೆ ಬೆಂಕಿ ಹಚ್ಚಿದ್ದಾನೆ. ಕುಮಟಾದ ವೆಂಕಟರಮಣ ಜಾತ್ರೆಗೆ ದಿನಕರ್ ಕುಟುಂಬದವರು ತೆರಳಿದ್ದರು. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ 18 ವರ್ಷದ ಫೈಸಾನ್ ಜಾಫರ್ ಶೇಕ್ ಎಂಬ ಯುವಕ ಅವರ ಮನೆಗೆ ಬೆಂಕಿ ಹಚ್ಚಿ ದ್ವೇಷ ಸಾಧಿಸಲು ಯತ್ನಿಸಿದ್ದಾನೆ.
ಇನ್ನು ಬೆಂಕಿ ಹಚ್ಚಿದ ತಕ್ಷಣವೇ ಆರೋಪಿಯನ್ನು ಸ್ಥಳೀಯರು ಹಿಡಿದಿದ್ದಾರೆ. ಸಾರ್ವಜನಿಕರ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿದೆಯಾದರೂ, ಘಟನೆಯಿಂದಾಗಿ ದೇವರ ಹಕ್ಕಲದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಕ್ರಮ ಕೈಗೊಂಡಿದ್ದಾರೆ.
For More Updates Join our WhatsApp Group :




