ಕಾಂಗ್ರೆಸ್ ಹೈಕಮಾಂಡ್​ಗೆ ಅಶೋಕ್ ಪ್ರಶ್ನೆ.

ಕಾಂಗ್ರೆಸ್ ಹೈಕಮಾಂಡ್​ಗೆ ಅಶೋಕ್ ಪ್ರಶ್ನೆ.

ಕಾಸರಗೋಡು ಕನ್ನಡಿಗರ ಹಿತಕ್ಕೆ ಕಾಂಗ್ರೆಸ್ ಏನು ಮಾಡುತ್ತಿದೆ? ಆರ್ ಅಶೋಕ್ ಪ್ರಶ್ನೆ

ಬೆಂಗಳೂರು : ಕೇರಳದ ‘ಮಲಯಾಳ ಭಾಷಾ ಮಸೂದೆ 2025’ ಇದರಿಂದ ಕರ್ನಾಟಕದ ಗಡಿ ಪ್ರದೇಶಗಳ, ವಿಶೇಷವಾಗಿ ಕಾಸರಗೋಡು ಮತ್ತು ಮಂಜೇಶ್ವರದ ಕನ್ನಡ ಮಾಧ್ಯಮ ಶಾಲೆ ಮಕ್ಕಳ ಮೇಲೆ ಆಗುವ ಪರಿಣಾಮಗಳ ಬಗ್ಗೆ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಗ್ಗೆ ಇರುವ ಕಾಳಜಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಕಾಸರಗೋಡು ಕನ್ನಡಿಗರ ಬಗ್ಗೆ ಯಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಪ್ರಕಟಿಸಿರುವ ಅವರು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಪ್ರಿಯಾಂಕ ಗಾಂಧಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಕೇರಳದಲ್ಲಿ ಆನೆ ತುಳಿತಕ್ಕೆ ಒಳಗಾಗಿ ಸತ್ತರೂ, ವಯನಾಡಿನಲ್ಲಿ ಪ್ರಕೃತಿ ವಿಕೋಪ ಉಂಟಾದರೂ, ಕೇರಳಿಗರ ಪರವಾಗಿ ಕರ್ನಾಟಕ ಸರ್ಕಾರದ ಮೇಲೆ ಸವಾರಿ ಮಾಡುವ ಸಂಸದೆ ಪ್ರಿಯಾಂಕಾ ಗಾಂಧಿ ಅವರು, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ ಮಲಯಾಳಂ ಅನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆ -2025ರ ವಿರುದ್ಧ ಧ್ವನಿ ಎತ್ತುವ ಮೂಲಕ ಈಗ ಕನ್ನಡಿಗರ ಪರ ನಿಲ್ಲುತ್ತಾರಾ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವ ವಿಷಯದಲ್ಲಿ ಕೇರಳದ ಪರ ತೋರಿದ ಕಾಳಜಿಯನ್ನು ಕರ್ನಾಟಕ ಕಾಂಗ್ರೆಸ್ ನಾಯಕರು ಈಗ ಕನ್ನಡಿಗರ ಪರವಾಗಿ ತೋರುತ್ತಾರಾ ಎಂದು ಅವರು ಪ್ರಶ್ನಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *