ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ತುಮಕೂರಿನಲ್ಲಿ ಎರಡು ಪ್ರತ್ಯೇಕ ಘಟನೆ..!!

ತುಮಕೂರು: ಕ್ಷುಲ್ಲಕ ಕಾರಣಕ್ಕೆ ಇಂದಿರಾ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡದ ಕ್ಯಾಂಟೀನ್ ಎದುರು ನಡೆದಿದೆ. ಕ್ಯಾಂಟೀನ್ ಮುಂಭಾಗದಲ್ಲಿ ವಾಹನ ನಿಲುಗಡೆ ಮಾಡಿದ್ದ ಯುವಕರನ್ನು ಪ್ರಶ್ನಿಸಿದ್ದಕ್ಕೆ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಕಿಡಿಗೇಡಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಹಲ್ಲೆ

ಘಟನೆಯಲ್ಲಿ ನಾಗರಾಜ್ ಮತ್ತು ಮಂಜು ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಯುವಕರ ವಿರುದ್ಧ ಪಾವಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನೂ ಇದೆ ಮಾದರಿ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹಾಲಿನ ಡೈರಿಯಲ್ಲಿ ಪಶು ಆಹಾರ ಉತ್ಪನ್ನವನ್ನು ನೀಡಲು ವಿಳಂಬ ಧೋರಣೆ ಅನುಸರಿಸಿದ್ದಾರೆ ಎಂದು ಆರೋಪಿಸಿ ಶೆಟ್ಟಿಕೆರೆ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶಿವಕುಮಾರ್ ಮೇಲೆ ಹಲ್ಲೆ ನಡೆದಿದೆ.

ಕ್ಷುಲ್ಲಕ ವಿಚಾರಕ್ಕೆ ಕರ್ತವ್ಯ ನಿರತ ಶಿವಕುಮಾರ್ ಮೇಲೆ ನಾಗರಾಜು, ಯೋಗಾನಂದ್, ಅನಿಲ್ ಎಂಬವರು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಕೇಳಿದ ತಕ್ಷಣ ಬೂಸಾ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಬೂಸಾ ಗೋದಾಮಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಮೂವರ ವಿರುದ್ಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *