ಜ್ಯೋತಿಷಿ ಕಮಲಾಕರ್ ಭಟ್ ಕೇಸ್ ರಾಜಕೀಯ ತಿರುವು.

ಜ್ಯೋತಿಷಿ ಕಮಲಾಕರ್ ಭಟ್ ಕೇಸ್ ರಾಜಕೀಯ ತಿರುವು.

ಹರಿಪ್ರಸಾದ್–ಸುರೇಶ್ ಕುಮಾರ್ ನಡುವೆ ತೀವ್ರ ವಾಕ್ಸಮರ

ಬೆಂಗಳೂರು : ವಿವಾಹಿತ ಮಹಿಳೆಯೋರ್ವರ ಜೊತೆಗೆ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ಆರೋಪ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಮೃತಪಟ್ಟಿರುವ ಘಟನೆಯೀಗ ಪರಿಷತ್​​ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್​​ ಮತ್ತು ಬಿಜೆಪಿ ಶಾಸಕ ಎಸ್​​.ಸುರೇಶ್​​ ಕುಮಾರ್​ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ ಮಾಡಿರುವ ಹರಿಪ್ರಸಾದ್​​ ಬಿಜೆಪಿ ಮತ್ತು ತಮ್ಮ ಹೆಸರನ್ನು ಉಲ್ಲೇಖಿಸಿರುವ ಬಗ್ಗೆ ಸುರೇಶ್​​ ಕುಮಾರ್​​ ಗರಂ ಆಗಿದ್ದು, ಕಾಂಗ್ರೆಸ್​​ ನಾಯಕನ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಕಾರವಾರದ ಸಿದ್ದಾಪುರದಲ್ಲಿ ಕಮಲಾಕರ್ ಭಟ್ ಹೆಸರಿನ ಜ್ಯೋತಿಷಿಯ ಅಕ್ರಮ ಸಂಬಂಧಕ್ಕೆ 41 ವರ್ಷದ ಅಮಾಯಕ ವಸಂತ್ ನಾಯ್ಕ್ ಬಲಿಯಾಗಿದ್ದಾರೆ. ಈ ಕ್ರಿಮಿನಲ್ ಪ್ರಕರಣ ನ್ಯಾಯಯುತ ತನಿಖೆಯಾಗಿ, ನ್ಯಾಯಾಲಯ ತೀರ್ಪು ಕೊಡುತ್ತದೆ. ಆದರೆ, ಇಂತಹ ಪ್ರಕರಣದಲ್ಲಿ ಸಂಘಪರಿವಾರದ ಹಿನ್ನಲೆಯಿಂದ ಬಂದ ಬಿಜೆಪಿಯ ಸುರೇಶ್​​ ಕುಮಾರ್​ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಂತಹ ಜನಪ್ರತಿನಿಧಿಗಳ ಪಾತ್ರ ಏನು? ಎಂಬುದು ಸ್ವಸ್ಥ ಸಮಾಜ ದೃಷ್ಟಿಯಿಂದ ಮುಖ್ಯವಾಗುತ್ತದೆ. ಕಮಲಾಕರ ಭಟ್ ಎಂಬ ಜ್ಯೋತಿಷಿ ಭಾಗಿಯಾದ ಕೊಲೆ ಕೇಸ್​​ನಲ್ಲಿ ರಾಜಾಜಿನಗರ ಶಾಸಕ ಸುರೇಶ್​​ ಕುಮಾರ್​​ ಪಾತ್ರವಿಲ್ಲವೇ? ಕೊಲೆ ಆರೋಪಿ ಜೋತಿಷಿ ಗುರೂಜಿ ಕಮಲಾಕರ ಭಟ್ಟನನ್ನು ಓರ್ವ ಶಾಸಕನಾಗಿ ಪ್ರೋತ್ಸಾಹಿಸಿ ಬೆಳೆಸಿದ್ದು ಸಂವಿಧಾನಕ್ಕೆ ಮಾಡುವ ಅಪಚಾರವಲ್ಲವೇ ? ಒರ್ವ ಮಾಜಿ ಕಾನೂನು ಸಚಿವನಿಗೆ ಇಷ್ಟೂ ಅರಿವಿಲ್ಲದಿರುವುದು ಈ ರಾಜ್ಯದ ದುರಂತವಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *