ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ. ಇಂದು (ನವೆಂಬರ್ 19) ಮಧ್ಯಾಹ್ನ ಇನ್ನೋವಾ ಕಾರಿನಲ್ಲಿ ಬಂದ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಪರಾರಿಯಾಗಿದೆ. ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್ನ ಬಳಿ ತಡೆದು ಹಣ ದೋಚಿಕೊಂಡು ಎಸ್ಕೇಪ್ ಆಗಿದೆ.
ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು GJ 01 HT 9173 ಸಂಖ್ಯೆ ವಾಹನ ಹಣ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ಜಯದೇವ ಡೇರಿ ಸರ್ಕಲ್ನಲ್ಲಿ ಇನ್ನೋವಾದಲ್ಲಿ ಬಂದ ಆರೇಳು ಜನರ ಗ್ಯಾಂಗ್, ಎಟಿಎಂ ವಾಹನ ತಡೆದು ನಾವು ಆರ್ಬಿಐನವರು ಎಂದು ಹೇಳಿಕೊಂಡು ಹೆದರಿಸಿದ್ದಾರೆ. ಗನ್ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್ಗೆ ಕರೆದೊಯ್ದಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
For More Updates Join our WhatsApp Group :
