ಬೆಂಗಳೂರಿನಲ್ಲಿ 6 ವಿದೇಶಿ ಮಹಿಳೆಯರು ಸಿಸಿಬಿ ವಶಕ್ಕೆ.
ಬೆಂಗಳೂರು: ಅತ್ತ ರಾಯಚೂರಿನ ಮಾನ್ವಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿ, ೧೧ ಆರೋಪಿಗಳನ್ನು ಬಂಧಿಸಿದ್ದ ಘಟನೆ ಬೆನ್ನಲ್ಲೇ ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆಗೆ ಪ್ರಚೋದನೆ ನೀಡುತ್ತಿದ್ದ 6 ವಿದೇಶಿ ಮಹಿಳೆಯರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ ರಸ್ತೆಯಲ್ಲಿ ನಿಂತು ವಿದೇಶಿ ಮಹಿಳೆಯರು ವೇಶ್ಯವಾಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪ ಕೇಳಿಬಂದಿದೆ. 6 ವಿದೇಶಿ ಮಹಿಳೆಯರು ರಸ್ತೆಯಲ್ಲಿ ನಿಂತು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 6 ಮಹಿಳೆಯರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಪ್ರಕರಣದಲ್ಲಿ ವಿದೇಶಿ ಮಹಿಳೆಯರ ಪಾಸ್ಪೋರ್ಟ್, ವೀಸಾ ಪರಿಶೀಲನೆ ನಡೆಸಲಾಗುತ್ತಿದೆ. ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
For More Updates Join our WhatsApp Group :




