ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಮೇ 10ರಂದು ನೇರಳೆ ಮಾರ್ಗದಲ್ಲಿ 2 ಗಂಟೆ ರೈಲು ಸಂಚಾರ ಸ್ಥಗಿತ.!

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಮೇ 10ರಂದು ನೇರಳೆ ಮಾರ್ಗದಲ್ಲಿ 2 ಗಂಟೆ ರೈಲು ಸಂಚಾರ ಸ್ಥಗಿತ.!

ಬೆಂಗಳೂರು ಮೆಟ್ರೋ ಅಪ್‌ಡೇಟ್: ನಿರ್ವಹಣಾ ಕಾಮಗಾರಿಯಿಂದ ಕೆಲ ನಿಲ್ದಾಣಗಳ ನಡುವೆ ಸೇವೆ ವ್ಯತ್ಯಯ.!

ಬೆಂಗಳೂರು : ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ಮೇ 10ರ ಭಾನುವಾರ ಬೆಳಿಗ್ಗೆ ಎರಡು ಗಂಟೆಗಳ ಕಾಲ ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ. ನೇರಳೆ ಮಾರ್ಗದಲ್ಲಿ ತಾಂತ್ರಿಕ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ನಿರ್ವಹಣಾ ಕಾಮಗಾರಿಯು ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳ ನಡುವೆ ನಡೆಯಲಿದೆ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲುಗಳು ಸಂಚರಿಸುವುದಿಲ್ಲ. ಮೆಜೆಸ್ಟಿಕ್‌ನಂತಹ ಪ್ರಮುಖ ನಿಲ್ದಾಣದಲ್ಲಿ ನೇರಳೆ ಮಾರ್ಗವು ಈ ಸಮಯದಲ್ಲಿ ಲಭ್ಯವಿರುವುದಿಲ್ಲ ಎಂಬುದು ಪ್ರಯಾಣಿಕರ ಗಮನದಲ್ಲಿರಲಿ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *