ಬೆಂಗಳೂರು,: ಪಾಕಿಸ್ತಾನ-ಭಾರತ ಯುದ್ಧ ಉದ್ವಿಗ್ನ ಸ್ಥಿತಿ ಏರ್ಪಟ್ಟ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಗಳನ್ನು ರದ್ದುಗೊಳಿಸಲಾಗಿದೆ. ಹೀಗಾಗಿ ಬೆಂಗಳೂರು ನಡೆಯಬೇಕಿದ್ದ ಪಂದ್ಯಗಳು ರದ್ದಾಗಿವೆ. ಹೀಗಾಗಿ ನಮ್ಮ ಮೆಟ್ರೋ ರೈಲು ಆಯಾ ದಿನಗಳಂದು ವಿಸ್ತರಣೆ ಸೇವೆಯ ಬದಲಾಗಿ ಎಂದಿನಂತೆ ಸಾಮಾನ್ಯ ವೇಳಾಪಟ್ಟಿಯಂತೆ ಕಾರ್ಯಾಚರಣೆ ಮಾಡಲು ನಿರ್ಧರಿಸಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತಿಳಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕಳೆದೊಂದು ತಿಂಗಳಿನಿಂದ ಬೆಂಗಳೂರು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ನಡೆದಿದ್ದವು. ಅದರಂತೆ ಮತ್ತೆ ಕೆಲವು ಪಂದ್ಯಾವಳಿಗಳನ್ನು ಇದೇ ತಿಂಗಳ ಮೇ 13 ಮತ್ತು 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ನಡುವೆ ಭಾರತ ಮತ್ತು ಪಾಕಿಸ್ತಾನ ಯುದ್ಧ ಸಂಘರ್ಷ ಹಿನ್ನೆಲೆಯಲ್ಲಿ ಮುಂಜಾಗ್ರತೆ ಹಾಗೂ ಸುರಕ್ಷತೆ ಕಾರಣದಿಂದ ಬಿಸಿಸಿಐ ಐಪಿಎಲ್ ಪಂದ್ಯಾವಳಿಗಳನ್ನು ನಡೆಸದೇ ಮುಂದೂಡಿತು.
ಮೇ 13 ಮತ್ತು 17 ರಂದು ಬೆಂಗಳೂರಲ್ಲಿ ಪಂದ್ಯಾವಳಿಗಳು ನಡೆಯಲಿವೆ ಎಂದು ನಮ್ಮ ಮೆಟ್ರೋ ರೈಲುಗಳ ಸಮಯ ವಿಸ್ತರಣೆ ಮಾಡಿತ್ತು. ಇದೀಗ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ರದ್ದಾದ ಕಾರಣ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲುಗಳು ಎಂದಿನಂತೆ ವೇಳಾಪಟ್ಟಿಗೆ ಅನುಗುಣವಾಗಿ ಓಡಾಡಲಿವೆ. ವಿಸ್ತರಣೆ ಮಾಡಿದ ಸೇವೆ ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.
ಮೆಟ್ರೋ ಪ್ರಯಾಣಿಕರು ಗಮನಿಸಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (BCCI) ಪ್ರಕಟಿಸಿದ್ದ ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನಲ್ಲಿ ನಡೆಸಲಿತ್ತು. ಹೀಗಾಗಿ ಪಂದ್ಯಾವಳಿಗೆ ಬರುವ ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗುಂತೆ ನಮ್ಮ ಮೆಟ್ರೋ ರೈಲು ಸಂಚಾರವನ್ನು ಎರಡು ದಿನವು ಸಹ ರಾತ್ರಿ 1:30 ರವರೆಗೆ ವಿಸ್ತರಣೆ ಮಾಡಲಾಗಿತ್ತು. ಈ ವಿಸ್ತರಣೆ ರದ್ದು ಮಾಡಲಾಗಿದ್ದು, ಮೆಟ್ರೋ ನೇರಳೆ ಮತ್ತು ಮೆಟ್ರೋ ಹಸಿರು ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಸಾಮಾನ್ಯ ಸೇವೆಗೆ ಅನುಗುಣವಾಗಿ ನಿರ್ವಹಿಸಲಾಗುತ್ತದೆ ಎಂದು ತಿಳಿಸಿದರು.
ನಮ್ಮ ಮೆಟ್ರೋ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಈ ವೇಳಾಪಟ್ಟಿ ನೋಡಿಕೊಂಡು ಯೋಜಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ BMRCL ಅಧಿಕೃತ ವೆಬ್ಸೈಟ್ ಇಲ್ಲವೇ ಬಿಎಸ್ಎನ್ಎಲ್ ಸಾಮಾಜಿಕ ಜಾಲತಾಣದ ಹ್ಯಾಂಡಲ್ ಅನುಸರಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.