‘ಸು ಫ್ರಮ್ ಸೋ’ ಚಿತ್ರದ ಹಾರರ್-ಕಾಮಿಡಿ ಸಿನಿಮಾ ಜುಲೈ 25ರಂದು ಪ್ರೇಕ್ಷಕರ ಎದುರು ಬರಲಿದೆ. ಮಂಗಳೂರಿನಲ್ಲಿ ನಡೆದ ಪ್ರೀಮಿಯರ್ ಶೋ ನಂತರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊಸ ಕಲಾವಿದರು ಹಾಗೂ ಯುವ ನಿರ್ದೇಶಕನ ಸಿನಿಮಾಗೆ ರಾಜ್ ಬಿ ಶೆಟ್ಟಿ ಬಂಡವಾಳ ಹೂಡಿದ್ದಾರೆ.

ಸ್ಯಾಂಡಲ್ವುಡ್ನಲ್ಲಿ ಈಗ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗುತ್ತಿವೆ. ಅದರಲ್ಲೂ ಜುಲೈ ತಿಂಗಳಲ್ಲಿ ಒಳ್ಳೊಳ್ಳೆಯ ಚಿತ್ರಗಳು ಥಿಯೇಟರ್ಗೆ ಬರುತ್ತಿವೆ. ಈಗಾಗಲೇ ‘ಎಕ್ಕ’ ಹಾಗೂ ‘ಜೂನಿಯರ್’ ಸಿನಿಮಾಗಳು ರಿಲೀಸ್ ಆಗಿ ಮೆಚ್ಚುಗೆ ಪಡೆದಿವೆ. ಹೀಗಿರುವಾಗಲೇ ಈ ವಾರ ಮತ್ತೊಂದು ಸಿನಿಮಾ ರಿಲೀಸ್ಗೆ ರೆಡಿ ಇದೆ. ಇಷ್ಟೇ ಅಲ್ಲ, ಚಿತ್ರದ ಪ್ರೀಮಿಯರ್ ಶೋ ನೋಡಿರೋ ಪ್ರೇಕ್ಷಕರು ಚಿತ್ರವನ್ನು ಹಾಡಿ ಹೊಗಳುತ್ತಿದ್ದಾರೆ. ಈ ಮೂಲಕ ಸ್ಯಾಂಡಲ್ವುಡ್ಗೆ ಒಂದೇ ತಿಂಗಳಲ್ಲಿ ಮೂರು ಹಿಟ್ ಸಿನಿಮಾಗಳು ಸಿಗುವ ನಿರೀಕ್ಷೆ ಇದೆ.
ಪಾತ್ರವರ್ಗ:
‘ಸು ಫ್ರಮ್ ಸೋ’ ಚಿತ್ರದಲ್ಲಿ ಯಾವುದೇ ದೊಡ್ಡ ಸ್ಟಾರ್ಸ್ ಇಲ್ಲ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಜೆಪಿ ತುಮಿನಾಡ ಅವರು. ಈ ಸಿನಿಮಾ ರಾಜ್ ಬಿ. ಶೆಟ್ಟಿ ಅವರ ‘ಲೈಟರ್ ಬುದ್ಧ ಫಿಲಂಸ್’ ಲಾಂಛನದ ಅಡಿಯಲ್ಲಿ ರಾಜ್ ಬಿ. ಶೆಟ್ಟಿ, ಶಶಿಧರ ಶೆಟ್ಟಿ ಬರೋಡಾ, ರವಿ ರೈ ಕಳಸ ನಿರ್ಮಾಣ ಮಾಡಿದ್ದಾರೆ. ಜೆಪಿ ತುಮಿನಾಡ, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡ, ಮೈಮ್ ರಾಮದಾಸ್, ದೀಪಕ್ ರೈ ಪಣಜೆ, ಅರ್ಜುನ್ ಕಜೆ ಮೊದಲಾದವರು ಅಭಿನಯಿಸಿದ್ದಾರೆ. ಎಲ್ಲರೂ ಈ ಮೊದಲು ಪೋಷಕ ಪಾತ್ರಗಳನ್ನು ಮಾಡಿ ಭೇಷ್ ಎನಿಸಿಕೊಂಡಿರುವುದು ವಿಶೇಷ.
ಸಿನಿಮಾದಲ್ಲಿ ಏನಿದೆ..
ಇದು ಮಂಗಳು ಭಾಗದಲ್ಲಿ ನಡೆಯುವ ಕಥೆ. ಹೀಗಾಗಿ, ಅದೇ ಆ ಭಾಗದ ಭಾಷೆಯನ್ನೇ ಇಲ್ಲಿ ಬಳಸಲಾಗಿದೆ. ಇದು ಚಿತ್ರದ ಹೈಲೈಟ್ ಕೂಡ ಹೌದು. ಇದು ಹಾರರ್ ಕಾಮಿಡಿ ಸಿನಿಮಾ. ಹಾರರ್ ಸಿನಿಮಾ ಅಂತ ಇಲ್ಲಿ ಭಯ ಪಡೋ ಅಗತ್ಯ ಇಲ್ಲ. ಏಕೆಂದರೆ ಅಲ್ಲಿಯೂ ನಿಮಗೆ ನಗು ಬರೋದು ಗ್ಯಾರಂಟಿ. ಆ ರೀತಿಯಲ್ಲಿ ಸಿನಿಮಾ ಮೂಡಿ ಬಂದಿದೆ ಎನ್ನುತ್ತಿದೆ ಟ್ರೇಲರ್.