ನಾಳೆ ಮತದಾನ; 2,59,797 ಮತದಾರರಿಗಾಗಿ ಭದ್ರತಾ ವ್ಯವಸ್ಥೆ ಜೋರು
ಬಾಗಲಕೋಟೆ : ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ನಾಳೆ ನಡೆಯಲಿರುವ ಮತದಾನ ಪ್ರಕ್ರಿಯೆಗಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಬಾಗಲಕೋಟೆಯ ನವನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆದಿದ್ದು, ಮತಗಟ್ಟೆಗಳಿಗೆ ನಿಯೋಜಿಸಲಾಗಿರುವ ಸಿಬ್ಬಂದಿಗಳು ಇವಿಎಂ ಯಂತ್ರಗಳನ್ನು ಪಡೆದು ತಮ್ಮ ಬೂತ್ಗಳತ್ತ ತೆರಳಿದ್ದಾರೆ.
ಕ್ಷೇತ್ರದಲ್ಲಿ ಒಟ್ಟು 2,59,797 ಮತದಾರರಿದ್ದು, ಇದರಲ್ಲಿ 1,26,999 ಪುರುಷರು, 1,32,775 ಮಹಿಳೆಯರು ಮತ್ತು 23 ಇತರೆ ಮತದಾರರಿದ್ದಾರೆ. ಒಟ್ಟು 322 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1564 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಹಿತಕರ ಘಟನೆಗಳನ್ನು ತಪ್ಪಿಸಲು 2,500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.
For More Updates Join our WhatsApp Group :




