ಬೆಂಗಳೂರು: ಈಗಾಗಲೇ ಬೆಂಗಳೂರಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಇದು ಎರಡು ಟರ್ಮಿನಲ್ಗಳನ್ನು ಒಳಗೊಂಡಿದ್ದರೂ ಸಹ ಪ್ರಯಾಣಿಕೆ ದಟ್ಟಣೆ ಮಾತ್ರ ಕಡಿಮೆಯಾಗುತ್ತಿಲ್ಲ. ಈ ಹಿನ್ನೆಲೆ ಸರ್ಕಾರವು ನಗರದ ಸಮೀಪ ಮತ್ತೊಂದು ಅಂತಾರಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಮುಂದಾಗಿದೆ. ಇದೀಗ ಸರ್ಕಾರ ತೆಗೆದುಕೊಂಡಿರುವ ಸ್ಥಳ ಗುರತಿನ ಕುರಿತು ನಿರ್ಧಾರಕ್ಕೆ ಸಚಿವ ಜಿ.ಪರಮೇಶ್ವರ್ ಹಾಗೂ ವಿ.ಸೋಮಣ್ಣ ಮುನಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ನೆಲಮಂಗಲದ ಬಳಿ ಸರ್ವೇ ಕಾರ್ಯ ಕೂಡ ನಡೆದಿತ್ತು. ಆದರೆ, ಇಲ್ಲಿನ ರೈತರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ನಾವು ಫಲವತ್ತಾದ ಭೂಮಿಯನ್ನು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬಿಟ್ಟುಕೊಡುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯನ್ನು ಸಹ ನಡೆಸಿದ್ದರು. ಇನ್ನು ಇಲ್ಲಿನ ಸ್ಥಳಿಯರ ಪರ ಶಾಸಕರು ಕೂಡ ನಿಂತಿದ್ದು, ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಡಿ. ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದರು.
ಈ ಕುರಿತು ಸರ್ಕಾರದ ಬಳಿ ಮಾತನಾಡಿದ್ದೇವೆ. ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದಾರಾಮಯ್ಯ ಅವರು ಇಲ್ಲಿ ವಿಮನಾ ನಿಲ್ದಾಣ ನಿರ್ಮಾಣ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದರು ಎಂದು ಹೇಳುವ ಮೂಲಕ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿದ್ದ ರೈತರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದರು. ಅಲ್ಲದೆ, ಒಂದು ವೇಳೆ ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿದ್ರೆ, ಶಾಸಕ ಸ್ಥಾನ ಮುಡುಪಾಗಿಟ್ಟರೂ ಸರಿ ರೈತರ ಪರ ನಿಂತು ಹೋರಾಟ ಮಾಡುವೆ ಎಂದು ಭರವಸೆ ನೀಡಿದ್ದರು. ಇದೇ ವೇಳೆ ನಿಸಿಮಾ ನಟ ವಿನೋದ್ ರಾಜ್ ಕೂಡ ಮಾತನಾಡಿ ನಮ್ಮ ಶಾಸಕರ ಮೇಲೆ ನಮಗೆ ನಂಬಿಕೆ ಇದೆ. ಅವರು ರೈತರ ಪರ ನಿಲ್ಲುವ ಭರವಸೆ ನಮಗಿದೆ ಎಂದು ತಿಳಿಸಿದ್ದರು. ಆದರೆ ಇದೀಗ ನೆಲಮಂಗಲ-ಕುಣಿಗಲ್ ರಸ್ತೆ ಮತ್ತು ಕನಕಪುರ ರಸ್ತೆಯಲ್ಲಿ ಎರಡು ಸ್ಥಳಗಳನ್ನು ಗುರುತಿಸಿ ಇದನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಕಳುಹಿಸಿದ್ದೇವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಇದರಿಂದ ಸಚಿವ ಜಿ.ಪರಮೇಶ್ವರ್ ಹಾಗೂ ವಿ.ಸೋಮಣ್ಣ ಮುನಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಮುನಿಸಿಗೆ ಕಾರಣವೇನು?: ನೆಮಮಂಗಲ ಬದಲಿಗೆ ನಮ್ಮ ತುಮಕೂರು ಬಳಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಿ. ಇದರಿಂದ ಬರೀ ತುಮಕೂರು ಬೆಂಗಳೂರು ಅಲ್ಲದೆ, ಉತ್ತರ ಕರ್ನಾಟಕ ಭಾಗದ ಜನರಿಗೆ ತುಂಬಾ ಅನುಕೂಲ ಆಗಲಿದೆ ಎಂದು ಸರ್ಕಾರದ ಬಳಿ ಮನವಿ ಮಾಡಿಕೊಳ್ಳುತ್ತಲೇ ಬಂದಿದ್ದಾರೆ. ಆದರೆ, ಸರ್ಕಾರ ಮಾತ್ರ ಇದನ್ನು ವಿಮಾನ ನಿಲ್ದಾಣ ನಿರ್ಮಾಣ ಸ್ಥಳದಲ್ಲಿ ಒಂದಾಗಿ ಗುರುತಿಸಿತ್ತು ಅಷ್ಟೇ ಬಿಟ್ಟರೆ. ಮತ್ತೆ ಈ ಬಗ್ಗೆ ಚಕಾರವನ್ನುನ ಕೂಡ ಎತ್ತಿಲ್ಲ ಎನ್ನುವುದೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.