ಬೆಂಗಳೂರು : ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರವು ಇದೀಗ ಎರಡನೇ ಹಂತ ತಲುಪಿದೆ. ಇದೀಗ ಎರಡನೇ ವಿಮಾನ ನಿಲ್ದಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಕೆಲವೊಂದು ಪ್ರಮುಖ ಬೇಡಿಕೆಗಳನ್ನು ಸಲ್ಲಿಸಿದೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರವು ಎರಡನೇ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಮನವಿಯ ಪ್ರಮುಖ ಅಂಶಗಳು ಲಭ್ಯವಾಗಿದೆ.

ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಇದೀಗ ವೇಗ ಪಡೆದುಕೊಂಡಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಅವಶ್ಯಕತೆ ಇರುವ ಹಿನ್ನೆಲೆಯಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ಇದೀಗ ಶಾರ್ಟ್ ಲಿಸ್ಟ್ ಮಾಡಲಾಗಿರುವ ಮೂರು ಜಾಗಗಳಲ್ಲಿ ಕೇಂದ್ರ / ಭಾರತೀಯ ವಿಮಾನ ನಿಲ್ದಾಣಗಳ ಅಭಿವೃದ್ಧಿ ಪ್ರಾಧಿಕಾರ ತಂಡ ಪರಿಶೀಲನೆ ನಡೆಸಬೇಕಿದೆ. ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲಿ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ವಿಶೇಷ ಮನವಿಯನ್ನು ಮಾಡಿದೆ. ಅಲ್ಲದೇ ಕೇಂದ್ರ ತಂಡವು ಇದೇ 6 ರಂದು (ಏಪ್ರಿಲ್ 6 &7) ಬೆಂಗಳೂರಿಗೆ ಆಗಮಿಸಲಿದೆ.
ಈ ಸಂಬಂಧ ಮಾತನಾಡಿರುವ ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು, ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಹೌದು ಬೆಂಗಳೂರು ಎರಡನೇ ವಿಮಾನ ನಿಲ್ದಾಣ, ಮೈಸೂರು, ಕಲಬುರಗಿ ಹಾಗೂ ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿಯ ವಿಚಾರವಾಗಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರೊಂದಿಗೆ ಕರ್ನಾಟಕ ಸರ್ಕಾರವು ಮಹತ್ವದ ಮಾತುಕತೆ ನಡೆಸಿದೆ. Technical Clearance ಕೊಡುವಂತೆ ಮನವಿ ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ಹಾಗೂ ತಾಂತ್ರಿಕ ಅನುಮತಿ (Technical Clearance) ವಿವಿಧ ಪ್ರಕ್ರಿಯೆಗಳನ್ನು ವೇಗವಾಗಿ ಮುಗಿಸಿಕೊಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಎಂ.ಬಿ ಪಾಟೀಲ್ ಅವರು ಮನವಿ ಮಾಡಿದ್ದಾರೆ ಎಂದು ಎಲ್.ಕೆ. ಅತೀಕ್ ಅವರು ತಿಳಿಸಿದ್ದಾರೆ.
ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ವಿಚಾರದಲ್ಲಿ ಕೇಂದ್ರ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿದೆ. ಅಲ್ಲದೇ ಪ್ರಕ್ರಿಯೆಗಳನ್ನು ವೇಗವಾಗಿ ಮುಗಿಸಿಕೊಡುವುದಾಗಿ ಭರವಸೆ ನೀಡಿದೆ ಎಂದು ಹೇಳಲಾಗಿದೆ. ವಿಮಾನ ನಿರ್ಮಾಣಕ್ಕೆ ಮೊದಲು Technical Clearance ಕೊಡಬೇಕಾಗುತ್ತದೆ. ಹೀಗಾಗಿ, ಇದನ್ನು ವೇಗವಾಗಿ ನೀಡುವಂತೆ ಮನವಿ ಮಾಡಲಾಗಿದೆ ಎಂದಿದ್ದಾರೆ. ಬೆಂಗಳೂರಿಗೆ ಬರಲಿದೆ ಕೇಂದ್ರ ತಂಡ: ಇನ್ನು ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆಗೆ ಸಂಬಂಧಿಸಿದಂತೆ ಕೇಂದ್ರ ತಂಡವು ಏಪ್ರಿಲ್ 6 ಮತ್ತು 7ಕ್ಕೆ (ಭಾನುವಾರ ಹಾಗೂ ಸೋಮವಾರ) ಭೇಟಿ ನೀಡಲಿದೆ ಎಂದು ಅತೀಕ್ ಅವರು ಹೇಳಿದ್ದಾರೆ.