ಬೆಂಗಳೂರು || BBMP ಚುನಾವಣೆ, ಬಿಬಿಎಂಪಿ ಬಜೆಟ್ ಬಗ್ಗೆ ಅಪ್ಡೇಟ್ ಕೊಟ್ಟ ಡಿ ಕೆ ಶಿವಕುಮಾರ್

ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಶಿವಕುಮಾರ್ ತಿರುಗೇಟು

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ನಡೆಸಲು ಕೊನೆಗೂ ಸರ್ಕಾರ ಸಿದ್ದತೆ ನಡೆಸುತ್ತಿದೆ. ಕಳೆದ ಐದು ವರ್ಷಗಳಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಇದೀಗ ಬಿಬಿಎಂಪಿಯ ಚುನಾವಣೆ ನಡೆಸುವ ಕುರಿತು ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಅಲ್ಲದೇ ಈ ತಿಂಗಳು ಬಿಬಿಎಂಪಿ ಬಜೆಟ್ ಮಂಡಿಸುವ ಕುರಿತು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಸಭೆ ನಡೆಸಿದ್ದಾರೆ. ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ಭಾಗದ ಸಚಿವರು ಹಾಗೂ ಶಾಸಕರನ್ನ ಸಭೆಗೆ ಆಹ್ವಾನಿಸಲಾಗಿತ್ತು. ಆದರೆ, ಬಿಜೆಪಿ ಶಾಸಕರು ಸಭೆಗೆ ಗೈರಾಗಿರುವ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಸದನದಿಂದ ಅಮಾನತು ಆದೇಶವನ್ನು ಹಿಂಪಡೆಯಿರಿ ಎಂದು ಅನೇಕ ಬಿಜೆಪಿ ಶಾಸಕರು ಬಿಬಿಎಂಪಿ ಬಜೆಟ್ ಸಭೆಗೆ ಗೈರಾಗಿದ್ದಾರೆ. ಇದು ನನಗೆ ಸಂಬಂಧಪಟ್ಟ ವಿಚಾರವಲ್ಲ ಸಭಾಧ್ಯಕ್ಷರು ಹಾಗೂ ನೀವುಂಟು ಎಂದು ಹೇಳಿದ್ದೇನೆ. ಸಭೆಯಲ್ಲಿ ಹಾಜರಿರುವ ಶಾಸಕರು, ಮಂತ್ರಿಗಳ ಬಳಿ ಬಜೆಟ್ ಬಗ್ಗೆ ಸಲಹೆ ಸೂಚನೆಗಳನ್ನು ತೆಗೆದುಕೊಂಡಿದ್ದೇವೆ. ಬಿಬಿಎಂಪಿ ಆಡಳಿತಾಧಿಕಾರಿಗಳು ಸಮಯ ನೋಡಿ ವಾಸ್ತವವಾಗಿ ಎಷ್ಟು ಗಾತ್ರದ ಬಜೆಟ್ ಅನ್ನು ಮಂಡಿಸಲು ಸಾಧ್ಯವೋ ಅದನ್ನು ಮಂಡಿಸುತ್ತಾರೆ ಎಂದು ತಿಳಿಸಿದರು.

ಅಶೋಕ್, ಅಶ್ವಥ ನಾರಾಯಣ ಅವರ ಬಳಿ ಬಜೆಟ್ ಸಭೆ ದಿನಾಂಕದ ಬಗ್ಗೆ ಚರ್ಚೆ ಮಾಡಿಯೇ ನಿಗಧಿ ಮಾಡಿದ್ದೆ. ಅವರಿಂದ ಸೂಕ್ತ ಸಲಹೆಗಳನ್ನು ಪಡೆದುಕೊಂಡು ಏನಾದರೂ ಬದಲಾವಣೆ ಮಾಡಲು ನಾವು ಬದ್ದರಾಗಿದ್ದೇವೆ. ಅನಧಿಕೃತವಾಗಿ ವಿರೋಧ ಪಕ್ಷಗಳ ನಾಯಕರು ಸಹ ಅನೇಕ ನಿರ್ಧಾರಗಳನ್ನು ಸ್ವಾಗತಿಸಿದ್ದಾರೆ. ರಾಜಕೀಯ ಕಾರಣಕ್ಕೆ ಸಭೆಗೆ ಗೈರಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. ಅಲ್ಲದೇ ಬೆಂಗಳೂರು ನಗರದ ಚುನಾಯಿತ ಪ್ರತಿನಿಧಿಗಳು ಬಿಬಿಎಂಪಿ ಬಜೆಟ್ ಬಗ್ಗೆ ಚರ್ಚೆ, ಸಲಹೆ ಸೂಚನೆ ವೇಳೆ ತಮ್ಮ ಕ್ಷೇತ್ರದ ಬೇಡಿಕೆಗಳು, ಸಮಸ್ಯೆಗಳು ಸೇರಿದಂತೆ ಹಲವಾರು ವಿಚಾರಗಳನ್ನು ಗಮನಕ್ಕೆ ತಂದಿದ್ದಾರೆ. ಇವುಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಬಜೆಟ್ ಮಂಡಿಸಲಾಗುವುದು. ಬಿಬಿಎಂಪಿ ಚುನಾವಣೆಯನ್ನು ಆದಷ್ಟು ಶೀಘ್ರದಲ್ಲಿಯೇ ನಡೆಸಲು ಸರ್ಕಾರ ತಯಾರಿ ಮಾಡಿಕೊಂಡಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ. ಇದರ ಬಗ್ಗೆ ವಿಪಕ್ಷಗಳು ಜಂಟಿ ಸದನ ಸಮಿತಿ ರಚಿಸುವಂತೆ ಮನವಿ ಮಾಡಿದ್ದೆವು. ಈಗಾಗಲೇ ಅನೇಕರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ರಾಜ್ಯಪಾಲರು ಎಷ್ಟು ಬೇಗ ಸಹಿ ಹಾಕಿ ಕಳುಹಿಸುತ್ತಾರೋ ಅಷ್ಟು ಬೇಗ ಪ್ರದೇಶಗಳನ್ನು ಗುರುತಿಸಿ, ಶಾಸಕರ ಬಳಿ ಮತ್ತೊಮ್ಮೆ ಚರ್ಚೆಮಾಡಿ ಚುನಾವಣೆಗೆ ತೆರಳುತ್ತೇವೆ. 73, 74ನೇ ತಿದ್ದುಪಡಿ ಬಗ್ಗೆ ನಮಗೆ ಬದ್ಧತೆಯಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಬಿಎಂಪಿಗೆ ನೀಡುತ್ತಿರುವ ಅನುದಾನವನ್ನು 4 ಸಾವಿರ ಕೋಟಿ ರೂಪಾಯಿಯಿಂದ ಯಿಂದ 7 ಸಾವಿರ ಕೋಟಿಗೆ ಹೆಚ್ಚಳ ಮಾಡಿದೆ. ಎಫ್ ಎಆರ್, ಜಾಹೀರಾತಿನಿಂದ ಪಾಲಿಕೆಗೆ ಆದಾಯ ಬರುತ್ತದೆ ಎಂದು ಅಂದಾಜು ಮಾಡಲಾಗಿತ್ತು. ನ್ಯಾಯಲಯ ಜಾಹೀರಾತು ವಿಚಾರದಲ್ಲಿ ಮಧ್ಯಪ್ರವೇಶ ಮಾಡಿದ ಕಾರಣ ಇದರಿಂದ ನಿರೀಕ್ಷಿತ ಆದಾಯ ಕಷ್ಟಸಾಧ್ಯ. ನ್ಯಾಯಲಯ ಈ ಹಿಂದೆ ಎರಡು- ಮೂರು ವಿಚಾರದಲ್ಲಿ ಹೀಗೆ ಮಧ್ಯಪ್ರವೇಶ ಮಾಡಿದ ಕಾರಣ ನಾವು ಜಾಗೃತರಾಗಿ ಬಜೆಟ್ ಮಂಡಿಸಬೇಕಾಗುತ್ತದೆ.

ಈ ಬಾರಿಯ ರಾಜ್ಯ ಬಜೆಟ್ ಅಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಅನೇಕ ಕೊಡುಗೆಗಳನ್ನು ಕೊಟ್ಟಿದ್ದಾರೆ. ಡಬಲ್ ಡೆಕ್ಕರ್, ಮೆಟ್ರೋ, ಮೇಲ್ಸೇತುವೆ, ಸುರಂಗ ರಸ್ತೆಗೆ ಹಣ ಕೊಟ್ಟಿದ್ದಾರೆ. ಇಷ್ಟು ದಿನಗಳ ಕಾಲ ಯಾವುದೇ ಸರ್ಕಾರವೂ ಬೆಂಗಳೂರಿಗೆ ಇಷ್ಟು ಹೆಚ್ಚಿನ ಅನುದಾನ ನೀಡಿರಲಿಲ್ಲ. ಈಗ ಬೆಂಗಳೂರಿಗೆ ಅತಿಹೆಚ್ಚು ಅನುದಾನ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೀದಿ ಬದಿ ವ್ಯಾಪಾರಿಗಳಿಗೆ ರಸ್ತೆಬದಿ ಮಳಿಗೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಅವಕಾಶವಿಲ್ಲ. ಈ ಬಗ್ಗೆ ನ್ಯಾಯಲಯದ ನಿರ್ದೇಶನವೂ ಇದೆ. ಈಗ ಸುಮಾರು 3,778 ಜನ ತಳ್ಳುವ ಗಾಡಿ ನೀಡಿ ಎಂದು ಅರ್ಜಿ ಹಾಕಿದ್ದಾರೆ. ನಾವು ಈ ವರ್ಷ ಪಾಲಿಕೆಯಿಂದ ಸುಮಾರು 10 ಸಾವಿರ ತಳ್ಳುವ ಗಾಡಿಗಳನ್ನು ನೀಡಲು ತಯಾರಿದ್ದೇವೆ. ಗಾಡಿ ಬೇಕಾದವರು ನೋಂದಣಿ ಮಾಡಿಕೊಳ್ಳಬೇಕು. ಗಾಡಿಯನ್ನು ಸುಮ್ಮನೆ ನಿಲ್ಲಿಸಿಕೊಳ್ಳುವಂತಿಲ್ಲ. ಪ್ರತಿದಿನ ಎಲ್ಲಿ, ಯಾವ ಜಾಗದಲ್ಲಿ ವಹಿವಾಟು ನಡೆಸಲಾಯಿತು ಎನ್ನುವ ಮಾಹಿತಿ ತಿಳಿದುಕೊಳ್ಳುವ ವ್ಯವಸ್ಥೆ ಜಾರಿಗೆ ತರಲಿದ್ದೇವೆ. ಗಾಡಿಯನ್ನು ಮನೆಯಲ್ಲಿ ನಿಲ್ಲಿಸಿಕೊಳ್ಳುವುದು, ಮತ್ತೊಬ್ಬರಿಗೆ ಮಾರುವುದಕ್ಕೆ ಅವಕಾಶವಿಲ್ಲ ಎಂದು ಹೇಳಿದರು. ಇದುವರೆಗೂ ಪಾಲಿಕೆಯಿಂದ 27,565 ಬೀದಿಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ದಿನಾಂಕವನ್ನು ಏಪ್ರಿಲ್ ಕೊನೆಯವರೆಗೆ ವಿಸ್ತರಿಸಲಾಗುವುದು. ನೋಂದಣಿ ಮಾಡಿಕೊಳ್ಳದ ವ್ಯಾಪಾರಿಗಳನ್ನು ಗಡವು ನಂತರ ತೆರವುಗೊಳಿಸಲಾಗುವುದು. ನೋಂದಣಿ ಮಾಡಿಕೊಂಡವರಿಗೆ ಸಹಾಯಧನ ನೀಡಿ ತಳ್ಳುವ ಗಾಡಿಗಳನ್ನು ನೀಡಲಾಗುವುದು. ನಾಲ್ಕು ಮಾದರಿಯ ತಳ್ಳು ಗಾಡಿಗಳನ್ನು ಪಾಲಿಕೆ ಸಿದ್ಧಪಡಿಸಿದೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

Leave a Reply

Your email address will not be published. Required fields are marked *