ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸುತ್ತಿದ್ದ 23 ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.
ಬೆಳಗ್ಗೆ 7 ರಿಂದ 9 ರವರೆಗೆ ನಡೆಸಿದ ವಿಶೇಷ ಅಭಿಯಾನದಲ್ಲಿ ಒಟ್ಟು 3016 ಶಾಲಾ ವಾಹನಗಳನ್ನು ತಪಾಸಣೆ ಮಾಡಲಾಗಿದ್ದು, ಈ ಪೈಕಿ 23 ಚಾಲಕರಿಗೆ ಮದ್ಯಪಾನ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ 23 ಚಾಲಕರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗಿದೆ ಮತ್ತು ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅವರ ಚಾಲನಾ ಪರವಾನಗಿಯನ್ನು ಆಯಾ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ರವಾನಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ(ಸಂಚಾರ) ಎಂ ಎನ್ ಅನುಚೇತ್ ಅವರು ತಿಳಿಸಿದ್ದಾರೆ.