ಬೆಂಗಳೂರು || ಪಾರ್ಕಿಂಗ್ ವಿಚಾರಕ್ಕೆ ಜಗಳ : ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ

ಬೆಂಗಳೂರು || ಪಾರ್ಕಿಂಗ್ ವಿಚಾರಕ್ಕೆ ಜಗಳ : ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ

ಬೆಂಗಳೂರು: ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಗಲಾಟೆಯಾಗಿದ್ದು, ಮೂವರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.

ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮತ್ತೋರ್ವನಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಗಳಿಂದ ತಿಳಿದುಬಂದಿದೆ.

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ,

ಎಸ್, ನಗರದ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಜಗಳ ಶುರುವಾಗಿದೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿತ್ತು, ಮೂವರಿಗೆ ಚಾಕುವಿನಿಂದ ಇರಿತವಾಗಿದೆ ಎಂದು ವರದಿಗಳು ತಿಳಿಸಿವೆ.

Leave a Reply

Your email address will not be published. Required fields are marked *