Bangalore || ಪ್ರೇಮ ವೈಫಲ್ಯಕ್ಕೆ ಮನನೊಂದ ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

Frustrated by love failure, a young woman commits suicide by hitting her head on a train

Likitha, Bangalore

ಬೆಂಗಳೂರು || ಪ್ರೇಮ ವೈಫಲ್ಯಕ್ಕೆ ಮನನೊಂದು ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

25 ವರ್ಷದ ಲಿಖಿತಾ ಮೃತ ದುರ್ದೈವಿ, ಲಿಖಿತಾ ಬಿಹಾರಿ ಮೂಲದ ಯುವಕನನ್ನು ಎರಡು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದಳು, ಆದರೆ ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗಾಗಿ ಲವ್ ಬ್ರೇಕ್ ಅಪ್ ಆಗಿತ್ತು ಎನ್ನಲಾಗಿದೆ

ಇದರಿಂದ ಲಿಖಿತಾ ಮನನೊಂದಿದ್ದು ಸಾಯುವ ಮಾತಗಳನ್ನಾಡುತ್ತಿದ್ದಳು, ವಾರದ ಹಿಂದಷ್ಟೇ ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ಬಂದಿದ್ದಳು ಒಂದು ವಾರದಿಂದ ಸೋಲದೇವನಹಳ್ಳಿಯ ಸಹೋದರಿಯ ನಿವಾಸದಲ್ಲಿ ವಾಸವಿದ್ದರು

ನಿನ್ನೆ ಮನೆಯಿಂದ ಹೊರಗೆ ಹೋಗಿದ್ದ ಲಿಖಿತಾ ವಾಪಸ್ಸು ಮನೆಗೆ ಬಂದಿರಲಿಲ್ಲ. ಅನುಮಾನಗೊಂಡು ಪೊಲೀಸರಿಗೆ ದೂರು ನೀಡಿದ್ದು ಇದೀಗ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ

ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ನಿಖಿತ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದ್ದು ಯಶವಂತಪುರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *