ಬೆಂಗಳೂರು || ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ; ಏನಿದರ ವೈಶಿಷ್ಟ್ಯಗಳು?: ಮಾಹಿತಿ ನೀಡಿದ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು || ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ; ಏನಿದರ ವೈಶಿಷ್ಟ್ಯಗಳು?: ಮಾಹಿತಿ ನೀಡಿದ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು:  ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ -ಐಕ್ಯಾಟ್ ನ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ. ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The International Centre for Automotive Technology) ನ ಎರಡು ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು; ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನದ ನೆಲೆವೀಡಾದ ಬೆಂಗಳೂರಿನಲ್ಲಿ ಇದರ ಮೂರನೇ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಐಕ್ಯಾಟ್ ನ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು

ದಕ್ಷಿಣದಲ್ಲಿಯೇ ಅತ್ಯಂತ ಆಯಕಟ್ಟಿನ ಹಾಗೂ ವ್ಯೂಹಾತ್ಮಕ ನಗರವೂ ಆಗಿರುವ ಬೆಂಗಳೂರಿನಲ್ಲಿ ಐಕ್ಯಾಟ್ ನ ಹೊಸ ಕೇಂದ್ರ ಬರುವುದು ಅತ್ಯಗತ್ಯವಾಗಿದೆ. ನಾವೀನ್ಯತೆ, ಆವಿಷ್ಕಾರ ಹಾಗೂ ಉದ್ಯಮಶೀಲತೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಅಟೋಮೊಬೈಲ್ ಕ್ಷೇತ್ರದ ಹಬ್ ಆಗಿಯೂ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಸ್ಥಾಪನೆ ಬಗ್ಗೆ ಕೇಂದ್ರದ ನಿರ್ದೇಶಕ ಸೌರಭ್ ದಲೇಲ ಅವರೊಂದಿಗೆ ಚರ್ಚಿಸಿದರು.

ಬೆಂಗಳೂರಿನಲ್ಲಿ ಆದಷ್ಟು ಬೇಗ ಐಕ್ಯಾಟ್ ಕೇಂದ್ರ ಆರಂಭ ಮಾಡುವ ಬಗ್ಗೆ ಪ್ರಕ್ರಿಯೆಗಳನ್ನು ಆರಂಭ ಮಾಡುವುದಾಗಿ ಅಧಿಕಾರಿಗಳು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಹೆ ಸ್ಪಷ್ಟ ಭರವಸೆ ನೀಡಿದರು. ಬೆಂಗಳೂರಿನಲ್ಲಿ ಸ್ಥಾಪನೆ ಆಗಲಿರುವ ಈ ಕೇಂದ್ರವು ಎಲೆಕ್ಟ್ರಿಕ್ ವಾಹನ (ಇವಿ) ತಂತ್ರಜ್ಞಾನ, ಸಾಫ್ಟ್ವೇರ್ ನಿಯಂತ್ರಿತ ವಾಹನಗಳು (ಎಸ್ಡಿವಿಗಳು), ಸ್ವಾಯತ್ತ ವ್ಯವಸ್ಥೆಗಳು ಮತ್ತು ದತ್ತಾಂಶ ಸುರಕ್ಷತೆಯಲ್ಲಿ ಐಕ್ಯಾಟ್ ಕೇಂದ್ರವು ನಿರ್ಣಾಯಕವಾಗಿ ಕೆಲಸ ಮಾಡುತ್ತದೆ. ಅಲ್ಲದೆ, ಈ ಕೇಂದ್ರವು ಬೆಂಗಳೂರಿನಲ್ಲಿ ಸ್ಥಾಪನೆ ಆಗುವುದರಿಂದ ಕರ್ನಾಟಕದ ಜತೆಗೆ ಅದರ ಅಕ್ಕಪಕ್ಕದ ರಾಜ್ಯಗಳಲ್ಲಿಯೂ ಅಟೋಮೊಬೈಲ್ ಆವಿಷ್ಕಾರಕ್ಕೆ ಭಾರೀ ಪ್ರಮಾಣದ ಉತ್ತೇಜನ ದೊರೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಸ್ಥಾಪನೆಗೆ ಕೇಂದ್ರದ ಬೃಹತ್ ಕೈಗಾರಿಕೆ ಸಚಿವಾಲಯದಿಂದ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವುದು ಹಾಗೂ ಅದೇ ರೀತಿ ಕರ್ನಾಟಕ ಸರ್ಕಾರದಿಂದ ಸಿಗಬೇಕಿರುವ ಅನುಕೂಲಗಳನ್ನು ಒದಗಿಸಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಸಚಿವರು ಐಕ್ಯಾಟ್ ನಿರ್ದೇಶಕರಿಗೆ ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಐಕ್ಯಾಟ್ ನ ಮೂರನೇ ಕೇಂದ್ರ ಬಂದರೆ ಅಟೋಮೊಬೈಲ್ ಕ್ಷೇತ್ರಕ್ಕೆ ಮಾತ್ರವಷ್ಟೇ ಅಲ್ಲದೆ, ರಕ್ಷಣೆ ಮತ್ತು ರೇಲ್ವೆ ಕ್ಷೇತ್ರಗಳಿಗೂ ಹೆಚ್ಚು ಉಪಯೋಗ ಆಗುತ್ತದೆ, ಹೊಸ ಅವಕಾಶದ ಬಾಗಿಲುಗಳನ್ನು ತೆರೆಯುತ್ತದೆ. ಅಟೋಮೊಬೈಲ್ ತಂತ್ರಜ್ಞಾನದ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಐಕ್ಯಾಟ್ 3ನೇ ಕೇಂದ್ರ; ಏನಿದರ ವೈಶಿಷ್ಟ್ಯಗಳು? * ಐಕ್ಯಾಟ್ 3ನೇ ಕೇಂದ್ರ ಕೇಂದ್ರ ಕೇವಲ ಒಂದು ತಂತ್ರಜ್ಞಾನ ಆಧಾರಿತ ಕೇಂದ್ರವಷ್ಟೇ ಆಗಿರದೆ, ಒಟ್ಟಾರೆ ಆರ್ಥಿಕತೆ ಮೇಲೆ ಪ್ರತಿಕೂಲಕರ ಪ್ರಭಾವ ಬೀರುತ್ತದೆ. * ಸುಧಾರಿತ ಎಲೆಕ್ಟ್ರಿಕ್ ತಂತ್ರಜ್ಞಾನ ಅಭಿವೃದ್ಧಿ ಮತ್ತು ಮಾಪನಾಂಕ ನಿರ್ಣಯದ ಪ್ರಯೋಗಾಲಯಗಳನ್ನು ಹೊಂದಿರುತ್ತದೆ.

Leave a Reply

Your email address will not be published. Required fields are marked *