ಬೆಂಗಳೂರು || ಕೆಇಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೊಸ ರೂಲ್ಸ್ – ಇನ್ಮುಂದೆ ಒಂದು ಪ್ರಶ್ನೆಗೆ 5 ಆಯ್ಕೆ

ಬೆಂಗಳೂರು || ಕೆಇಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೊಸ ರೂಲ್ಸ್ – ಇನ್ಮುಂದೆ ಒಂದು ಪ್ರಶ್ನೆಗೆ 5 ಆಯ್ಕೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇನ್ನುಮುಂದೆ ಹೊಸ ರೂಲ್ಸ್ ಜಾರಿ ಮಾಡುವುದಾಗಿ ಕೆಇಎ ತಿಳಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಯಲ್ಲಿ ಒಂದು ಪ್ರಶ್ನೆಯ ಉತ್ತರಕ್ಕೆ 5 ಆಯ್ಕೆಯನ್ನು ಕೆಇಎ ಕೊಡಲಿದೆ. ಇನ್ನುಮುಂದೆ ನಡೆಯುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈ ಹೊಸ ನಿಯಮ ಅನ್ವಯವಾಗಲಿದೆ. ಯುಜಿಸಿಇಟಿ-2025 ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಸಿಇಟಿ ಪರೀಕ್ಷೆಯಲ್ಲಿ ಎಂದಿನಂತೆ ಒಂದು ಪ್ರಶ್ನೆಯ ಉತ್ತರಕ್ಕೆ 4 ಆಯ್ಕೆ ಮುಂದುವರಿಯಲಿದೆ. ಸಿಇಟಿ ಎಕ್ಸಾಂನಲ್ಲಿ ಯಾವುದೇ ಬದಲಾವಣೆ ಇಲ್ಲ. ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾತ್ರ 5 ಉತ್ತರ ಆಯ್ಕೆಗಳು ಇರಲಿವೆ ಎಂದು ಕೆಇಎ ತಿಳಿಸಿದೆ.

Leave a Reply

Your email address will not be published. Required fields are marked *