ಬೆಂಗಳೂರು: ಬೆಂಗಳೂರಿನಲ್ಲಿ ನೀರು ಪೂರೈಕೆ ಹಾಗೂ ಎಲ್ಲಾ ಅಪಾರ್ಟ್ಮೆಂಟ್ಗಳಿಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಮಹತ್ವದ ಹಾಗೂ ಹೊಸ ಸೂಚನೆಯೊಂದನ್ನು ಕೊಟ್ಟಿದ್ದಾರೆ. ಅಲ್ಲದೆ ಈ ನಿಯಮವನ್ನು ಬೆಂಗಳೂರಿನಲ್ಲಿರುವ ಎಲ್ಲಾ ಅಪಾರ್ಟ್ಮೆಂಟ್ಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಹ ಸೂಚನೆ ಕೊಟ್ಟಿದ್ದಾರೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಬೆಂಗಳೂರಿನ ಎಲ್ಲಾ ಅಪಾರ್ಟ್ಮೆಂಟ್ಗಳಿಗೂ ಡಿ.ಕೆ ಶಿವಕುಮಾರ್ ಅವರು ಕೊಟ್ಟಿರುವ ಸೂಚನೆಯು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನ ಅಪಾರ್ಟ್ಮೆಂಟ್ ಅಸೋಸಿಯೇಷನ್ಗಳು ಈ ಹೊಸ ಆದೇಶವನ್ನು ಯಾವ ರೀತಿ ಪಾಲಿಸುತ್ತವೆ ಎನ್ನುವುದು ಈಗ ಚರ್ಚೆಯಾಗುತ್ತಿದೆ. ಡಿ.ಕೆ ಶಿವಕುಮಾರ್ ಅವರ ಹೊಸ ಸೂಚನೆ ಏನು, ಅಪಾರ್ಟ್ಮೆಂಟ್ಗಳಿಗೆ ಅವರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.
ಬೆಂಗಳೂರಿನಲ್ಲಿ ಈಗಾಗಲೇ ಜಲಮಂಡಳಿ ನೀರಿನ ದರ ಏರಿಕೆ ಮಾಡುವುದು ಅನಿವಾರ್ಯ ಎಂದು ಹೇಳಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನ ಅಪಾರ್ಟ್ಮೆಂಟ್ಗಳಿಗೆ ಮತ್ತೊಂದು ಶಾಕ್ ಕೊಟ್ಟಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಿರುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಬೆಂಗಳೂರಿನಲ್ಲಿ ಒಂದಿಲ್ಲೊಂದು ಸೇವೆಗಳ ಬೆಲೆ ಏರಿಕೆಯಾಗುತ್ತಿದ್ದು. ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಬೆಂಗಳೂರಿನಲ್ಲಿರುವ ಎಲ್ಲಾ ಅಪಾರ್ಟ್ಮೆಂಟ್ಗಳು ಕಡ್ಡಾಯವಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಸಂಪರ್ಕ ತೆಗೆದುಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಈಗಾಗಲೇ ಜಲಮಂಡಳಿಯು ನಗರದಲ್ಲಿರುವ ಎಲ್ಲಾ ಅಪಾರ್ಟ್ಮೆಂಟ್ಗಳಿಗೆ ಸಂಪರ್ಕ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಇದೀಗ ಇದನ್ನು ಕಡ್ಡಾಯ ಗೊಳಿಸಲಾಗುತ್ತಿದೆ. ಜಲಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ಮಾಡಿದ ಬಳಿಕ ಡಿ.ಕೆ ಶಿವಕುಮಾರ್ ಅವರು ಈ ಸೂಚನೆ ಕೊಟ್ಟಿದ್ದಾರೆ.
ಡಿ.ಕೆ ಶಿವಕುಮಾರ್ ಹೇಳಿದ್ದೇನು ? ಬೆಂಗಳೂರಿನಲ್ಲಿ ಎಲ್ಲಾ ಅಪಾರ್ಟ್ಮೆಂಟ್ಗಳು ಸಹ ಕಡ್ಡಾಯವಾಗಿ ಜಲಮಂಡಳಿಯಿಂದ ಕಾವೇರಿ ನೀರಿನ ಸಂಪರ್ಕ ಪಡೆದುಕೊಳ್ಳಬೇಕು ಎಂದು ಡಿ.ಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಈಗಾಗಲೇ 15,000 ಸಾವಿರಕ್ಕೂ ಹೆಚ್ಚು ಅಪಾರ್ಟ್ಮೆಂಟ್ಗಳಿಗೆ ಜಲಮಂಡಳಿಯಿಂದ ಕಾವೇರಿ ನೀರಿನ ಸಂಪರ್ಕವನ್ನು ಕೊಡಲಾಗಿದೆ. ಇನ್ನೂ ಬೆಂಗಳೂರಿನಲ್ಲಿ 20,000 ಸಾವಿರಕ್ಕೂ ಹೆಚ್ಚು ಅಪಾರ್ಟ್ಮೆಂಟ್ಗಳು ಕಾವೇರಿ ನೀರಿನ ಸಂಪರ್ಕವನ್ನು ತೆಗೆದುಕೊಂಡಿಲ್ಲ. ಈ ರೀತಿ ಜಲಮಂಡಳಿಯಿಂದ ಕಾವೇರಿ ನೀರಿನ ಸಂಪರ್ಕ ತೆಗೆದುಕೊಳ್ಳದೆ ಇರುವವರು ಕೂಡಲೇ ಕಾವೇರಿ ನೀರಿನ ಸಂಪರ್ಕವನ್ನು ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕ್ರಮ ತೆಗೆದುಕೊಳ್ಳುವ ಬಗ್ಗೆ ಚಿಂತನೆ ನಡೆಸುವುದಾಗಿ ಡಿ.ಕೆ ಶಿವಕುಮಾರ್ ಅವರು ಸೂಚನೆ ಕೊಟ್ಟಿದ್ದಾರೆ. ಎಲ್ಲಾ ಅಪಾರ್ಟ್ಮೆಂಟ್ಗಳಿಗೆ ಜಲಮಂಡಳಿ ಸಂಪರ್ಕ ಕಡ್ಡಾಯ ಕಾರಣವೇನು ? ಬೆಂಗಳೂರಿನಲ್ಲಿ ಎಲ್ಲಾ ಅಪಾರ್ಟ್ಮೆಂಟ್ಗಳು ಸಹ ಕಡ್ಡಾಯವಾಗಿ ಬಿಡಬ್ಲ್ಯುಎಸ್ಎಸ್ ಸಂಪರ್ಕ ತೆಗೆದುಕೊಳ್ಳಬೇಕು ಎನ್ನುವುದಕ್ಕೆ ಕಾರಣವೇನು ಎನ್ನುವ ಬಗ್ಗೆಯೂ ಡಿ.ಕೆ ಶಿವಕುಮಾರ್ ಅವರೇ ವಿವರಿಸಿದ್ದಾರೆ. ಜಲಮಂಡಳಿ ಹಾಗೂ ಸರ್ಕಾರದಿಂದ ಬೆಂಗಳೂರಿನಲ್ಲಿ ಕಾವೇರಿ ನೀರು ಸಂಪರ್ಕ ಯೋಜನೆಗೆ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಲಾಗಿದೆ. ಎಲ್ಲರೂ (ಅಪಾರ್ಟ್ಮೆಂಟ್ಗಳು) ಕಡ್ಡಾಯವಾಗಿ ಸಂಪರ್ಕ ಪಡೆದುಕೊಳ್ಳಬೇಕು. ಯಾಕೆಂದರೆ ಎಲ್ಲರೂ ಬೇರೆ ಬೇರೆ ರೂಪದಲ್ಲಿ ಡೆಪಾಸಿಟ್ ಹಾಗೂ ಸೆಸ್ಗಳನ್ನು ಪಾವತಿ ಮಾಡಬೇಕಾಗುತ್ತದೆ. ಅಂದರೆ ಜಲಮಂಡಳಿ ಸಂಪರ್ಕಕ್ಕೆ ದುಡ್ಡು ಹಾಗೂ ಸೇವಾ ಶುಲ್ಕ ಪಾವತಿ ಮಾಡಬೇಕಾಗುತ್ತದೆ. ಆದರೆ ಹಲವು ಅಪಾರ್ಟ್ಮೆಂಟ್ಗಳು ಸಂಪರ್ಕ ತೆಗೆದುಕೊಂಡಿಲ್ಲ. ಈ ರೀತಿ ಯಾರು ಜಲಮಂಡಳಿಯಿಂದ ಕಾವೇರಿ ನೀರಿನ ಸಂಪರ್ಕ ತೆಗೆದುಕೊಂಡಿಲ್ಲವೊ ಅವರನ್ನು ಗುರುತಿಸಿ ಸಂಪರ್ಕ ತೆಗೆದುಕೊಳ್ಳುವಂತೆ ಸೂಚನೆ ನೀಡಲು ಜಲಮಂಡಳಿಯ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಿರ್ದೇಶನ ನೀಡಿದ್ದಾರೆ.