ಬೆಂಗಳೂರು || 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೆಲಮಂಗಲ ಜನರ ವಿರೋಧವೇಕೆ?

ಬೆಂಗಳೂರು || 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೆಲಮಂಗಲ ಜನರ ವಿರೋಧವೇಕೆ?

ಬೆಂಗಳೂರಿನ ಬಳಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲು ಈಗಾಗಲೇ ನಾಲ್ಕು ಕಡೆ ಸ್ಥಳಗಳನ್ನು ಗುರುತಿಸಲಾಗಿದೆ. ಆದರೆ, ಇನ್ನೂ ಸ್ಥಳ ಫೈನಲ್ ಆಗಿಲ್ಲ. ಇದರ ನಡುವೆಯೇ ನೆಲಮಂಗಲ ಜನರು ಇದಕ್ಕೆ ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾರಣ ಏನೆಂದು ಇಲ್ಲಿ ತಿಳಿಯಿರಿ.

ಬೆಂಗಳೂರಿನಲ್ಲಿ ಈಗಾಗಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದೆ. ಈ ವಿಮಾನ ನಿಲ್ದಾಣವು ಎರಡು ಟರ್ಮಿನಲ್ಗಳನ್ನು ಒಳಗೊಂಡಿದ್ದು, ಇದರಲ್ಲಿ ಎರಡನೇ ಟರ್ಮಿನಲ್ ವಿಶ್ವದಲ್ಲಿಯೇ ಅತ್ಯಂತ ಸುಂದರ ಟರ್ಮಿನಲ್ ಎಂದು ಪ್ರಸಿದ್ಧಿ ಪಡೆದಿದೆ. ಹೀಗೆ ಎರಡು ಟರ್ಮಿನಲ್ ಒಳಗೊಂಡಿದ್ದರೂ ಸಹ ಪ್ರಯಾಣಿಕರ ದಟ್ಟಣೆ ಮಾತ್ರ ಹೆಚ್ಚಾಗುತ್ತಲೇ ಇತ್ತು. ಈ ಹಿನ್ನೆಲೆ ಬೆಂಗಳೂರಿನ ಸಮೀಪ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ. ತುಮಕೂರು, ನೆಲಮಂಗಲ, ಬಿಡದಿ ಮತ್ತು ರಾಮನಗರ ಸುತ್ತಮುತ್ತ ವಿಮಾನ ನಿಲ್ದಾಣಕ್ಕೆ ಸ್ಥಳ ಗುರುತಿಸಲಾಗಿದೆ. ಈ ಪೈಕಿ ನೆಲಮಂಗಲದಲ್ಲಿಯೇ ವಿಮಾನ ನಿಲ್ದಾಣಕ್ಕೆ ಸರ್ವೆ ಅಧಿಕಾರಿಗಳು ಸ್ಥಳ ಪರಿಶೀಲನೆ ಹಾಗೂ ಸರ್ವೆ ಕಾರ್ಯ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಇದಕ್ಕೆ ನೆಲಮಂಗಲ ಜನರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಮತ್ತೆ ಆಕ್ರೋಶ ಹೊರಹಾಕಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತುಮಕೂರು, ನೆಲಮಂಗಲ, ಬಿಡದಿ ಮತ್ತು ರಾಮನಗರ ಸುತ್ತಮುತ್ತ ವಿಮಾನ ನಿಲ್ದಾಣಕ್ಕೆ ಸ್ಥಳ ಗುರುತಿಸಲಾಗಿದೆ. ಈ ಪೈಕಿ ನೆಲಮಂಗಲದಲ್ಲಿಯೇ ವಿಮಾನ ನಿಲ್ದಾಣಕ್ಕೆ ಸರ್ವೆ ಅಧಿಕಾರಿಗಳು ಸ್ಥಳ ಪರಿಶೀಲನೆ ಹಾಗೂ ಸರ್ವೆ ಕಾರ್ಯ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಇದಕ್ಕೆ ನೆಲಮಂಗಲ ಜನರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಮತ್ತೆ ಆಕ್ರೋಶ ಹೊರಹಾಕಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೈಗಾರಿಕಾ ಪ್ರದೇಶ ಅಭಿವೃದ್ಧಿ ಹಿನ್ನೆಲೆ ಕೃಷಿ ಭೂಮಿ ಸ್ವಾಧೀನ ಪಡಿಸಿಕೊಳ್ಳುವುದಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತೀವ್ರ ಪ್ರತಿರೋಧ ವ್ಯಕ್ತ ಆಗುತ್ತಿದೆ. ಇನ್ನು ಬೆಂಗಳೂರಿನೊಂದಿಗೆ ಗಡಿ ಹೊಂದಿಕೊಂಡಿರುವ ಗ್ರಾಮಾಂತರ ಪ್ರದೇಶಕ್ಕೆ ಭೂಸ್ವಾಧೀನ ಬಿಸಿ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಈ ನಡುವೆಯೇ ವಿಮಾನ ನಿಲ್ದಾಣವನ್ನು ನೆಲಮಂಗಲದಲ್ಲಿ ನಿರ್ಮಾಣ ಮಾಡುವ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದ್ದು, ಇದಕ್ಕೆ ಭಾರೀ ವಿರೋಧಗಳು ವ್ಯಕ್ತವಾಗುತ್ತಿದೆ. ಎಲದಲಾ ತಾಲೂಕುಗಳಲ್ಲೂ ಸಹ ವಿವಿಧ ಹಂತಗಳಲ್ಲಿ ಕೃಷಿಭೂಮಿ ಸ್ವಾಧೀನಕ್ಕೆ ಸರ್ಕಾರ ಮುಂದಾಗಿರುವುದು ಈ ಭಾಗದ ರೈತರಿಗೆ ಭಾರೀ ಆತಂಕವನ್ನು ಸೃಷ್ಟಿಸಿದೆ. ಹೈನೋದ್ಯಮಕ್ಕೂ ಇದು ದೊಡ್ಡ ಹೊಡೆತ ಕೊಡಲಿದೆ ಎನ್ನುವುದು ಈ ಭಾಗದ ಜನರ ಅಳಲಾಗಿದೆ. ಈಗಾಗಲೇ ಸರ್ಕಾರಗಳು ಕೃಷಿ ಭೂಮಿಯನ್ನು ಕೈಗಾರಿಕೆ ಅಭಿವೃದ್ಧಿಗೆ ಬಳಸಿಕೊಳ್ಳುವುದನ್ನು ಕೈಬಿಡಬೇಕು. ಇಲ್ಲವಾದರೆ, ನಿರಂತರವಾಗಿ ಹೋರಾಟ ನಡೆಸಲು ಆಯಾ ಭಾಗದ ರೈತರು ತೀರ್ಮಾನ ಮಾಡಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ಹಂತಕ್ಕೆ ತಲುಪಲಿದೆ ಕಾದುನೋಡಬೇಕಿದೆ.

ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿ ಹಾಗೂ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿನ ಒಟ್ಟು 32 ಗ್ರಾಮಗಳ 18,500 ಎಕರೆಗಳಷ್ಷು ಭೂಮಿಯನ್ನು ಟೌನ್ ಶಿಪ್ ನಿರ್ಮಾಣದ ಕಾರಣಕ್ಕೆ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿದೆ. ಇದರಲ್ಲಿ ಕೃಷಿ ಭೂಮಿ ಕೂಡ ಒಳಗೊಂಡಿದ್ದು, ಈ ಭಾಗದಲ್ಲಿ ಟೌನ್ ಶಿಪ್ ಕೈಬಿಡುವಂತೆ ಒತ್ತಾಯ ವ್ಯಕ್ತ ಆಗುತ್ತಿದೆ. ನೆಲಮಂಗಲ ತಾಲೂಕಿನಲ್ಲಿ ನಾನಾ ಗ್ರಾಮಗಳನ್ನು ಒಳಗೊಂಡಂತೆ 6000 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ

ಪ್ರಸ್ತಾವನೆ ಸಲ್ಲಿಕೆ ಆಗಿದೆ. ಆದರೆ ಇದಕ್ಕೂ ಸಹ ಈ ಭಾಗದ ಜನರು ತೀವ್ರ ವಿರೋಧ ವ್ಯಕ್ತಪಡಿಸಿದರು. ದೊಡ್ಡಬಳ್ಳಾಪುರ-ದಾಬಸ್ಪೇಟೆ ಗಡಿಭಾಗದಲ್ಲಿನ ಹುಲಿಕುಂಟೆ, ತ್ಯಾಮಗೊಂಡ್ಲು ಸೇರಿ ಹಲವು ಪ್ರದೇಶದಲ್ಲಿ ಕೈಗಾರಿಕೆಗಳಿಗೆ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದ್ದು, ಇದರಿಂದ ಈ ಭಾಗದಲ ಜನರಿಗೆ ತೀವ್ರ ಆತಂಕವನ್ನು ಸೃಷ್ಟಿಸಿದೆ.

Leave a Reply

Your email address will not be published. Required fields are marked *