ಹಾಸನ: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಕುಟುಂಬ ಸಮೇತರಾಗಿ ಬಂದು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಆ ಬಳಿಕ ಮಾತನಾಡಿದ ಅವರು, ಇದೇನು ಮೊದಲ ಬಾರಿಗೆ ಹಾಸನಾಂಬೆಯ ದರ್ಶನವನ್ನು ನಾನು ಪಡೆಯುತ್ತಿಲ್ಲ. ನಮ್ಮ ಮನೆ ಮುಂದಿನ ಬೀದಿಯಲ್ಲಿದ್ದು, ಚಿಕ್ಕಂದಿನಿಂದಲೂ ತಾಯಿಯ ಕೈ ಬೆರಳು ಹಿಡಿದುಕೊಂಡು ದೇವಿ ದರ್ಶನಕ್ಕೆ ಬರುತ್ತಿದ್ದೆ. ಆಗ ಯಾರಿಗೂ ಅದು ಗೊತ್ತಾಗುತ್ತಿರಲಿಲ್ಲ.
ಇದು ಭಾವೈಕ್ಯತೆಯ ಸ್ಥಳವಾಗಿದ್ದು ಮುಸ್ಲಿಂ ಸಮುದಾಯದವರೂ ಬಹಳಷ್ಟು ಮಂದಿ ಹಿಂದೆ ಇಲ್ಲಿಗೆ ಬರುತ್ತಿದ್ದರು. ಈಗಲೂ ಕೆಲವರು ಬರುತ್ತಾರೆ ಎಂದು ಬಾನು ಮುಷ್ತಾಕ್ ತಿಳಿಸಿದ್ದಾರೆ.
For More Updates Join our WhatsApp Group :
