ತುಮಕೂರು ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ವಿವಾದ ರಕ್ತಪಾತಕ್ಕೆ ಅಂತ್ಯ
ತುಮಕೂರು : ಜಾಗದ ವಿಚಾರವಗಿ ರಿಯಲ್ ಎಸ್ಟೇಟ್ ಉದ್ಯಮಿ ಯುವಕನೋರ್ವನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದಿದೆ. ಮಚ್ಚಿನಿಂದ ಕೊಚ್ಚಿ ಮಧುವನ್(25) ಕೊಲೆ ಮಾಡಲಾಗಿದ್ದು, ಪ್ರಕರಣ ಸಂಬಂಧ ರಿಯಲ್ ಎಸ್ಟೇಟ್ ಉದ್ಯಮಿ ಮಹೇಶ್ ಮತ್ತು ಶಫಿವುಲ್ಲಾರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
2015ರಲ್ಲಿ ಮಧುಸೂದನ್ ಅವರ ತಂದೆ ನಾರಾಯಣಸ್ವಾಮಿ ತುಮಕೂರಿನ ಅಮಾನಿಕೆರೆ ಬಳಿಯ 3 ಕೋಟಿ ರೂ. ಮೌಲ್ಯದ 2.2 ಎಕರೆ ಜಮೀನು ಮಾರಾಟಕ್ಕೆ ಚಿಂತನೆ ನಡೆಸಿದ್ದರು. ನಾರಾಯಣಸ್ವಾಮಿ ಅವರಿಗೆ ಆ ಜಮೀನು ತಮ್ಮ ತಾಯಿಯಿಂದ ಬಂದಿದ್ದು, ಇದನ್ನು ಉದ್ಯಮಿ ಮಹೇಶ್ಗೆ ಮಾರಾಟ ಮಾಡಲು ಮುಂದಾಗಿದ್ದರು. ಆದರೆ ಜಮೀನಿನ ದಾಖಲೆಗಳು ಸರಿಯಾಗಿ ಇಲ್ಲದ ಕಾರಣ ಅದನ್ನು ಸರಿಪಡಿಸಲು 3 ವರ್ಷಗಳ ಕಾಲ ಸಮಯ ತೆಗೆದುಕೊಂಡಿದ್ದರು. 2018ರಲ್ಲಿ ಸಮಸ್ಯೆ ಬಗೆಹರಿದ ಬಳಿಕ ಈ ವಿಚಾರಕ್ಕೆ ಮಗ ಮಧುಸೂಧನ್ ಎಂಟ್ರಿಯಾಗಿತ್ತು. ಜಮೀನು ಮಾರಾಟ ಮಾಡಲು ಅವರು ಒಪ್ಪದ ಕಾರಣ ಕಳೆದ 7 ವರ್ಷಗಳಿಂದ ಜಮೀನು ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಮಚ್ಚಿನಿಂದ ಕೊಚ್ಚಿ ಕೊಲೆ
ಇದೇ ಜಮೀನು ಸಂಬಂಧಿತ ವಿಚಾರ ಸಂಬಂಧ ಮಾತನಾಡಿಸಲು ಮಹೇಶ್ ತೋಟಕ್ಕೆ ಬಂದಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ನಡೆದ ಜಗಳ ವಿಕೋಪಕ್ಕೆ ಹೋಗಿದೆ. ಅಲ್ಲೇ ಇದ್ದ ಮಚ್ಚಿನಿಂದ ಕೊಚ್ಚಿ ಮಧುಸೂದನ್ ಅವರ ಹತ್ಯೆ ಮಾಡಲಾಗಿದೆ. ಪ್ರಕರಣ ಸಂಬಂಧ ರಿಯಲ್ ಎಸ್ಟೇಟ್ ಉದ್ಯಮಿ ಮಹೇಶ್ ಹಾಗೂ ಶಫಿವುಲ್ಲಾ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
For More Updates Join our WhatsApp Group :




