ಮಳೆಗಾಲ ಮುನ್ನ BBMP ಅಲರ್ಟ್: ರಸ್ತೆ-ಚರಂಡಿ ಪರಿಶೀಲನೆಗೆ ಸೂಚನೆ.

ಮಳೆಗಾಲ ಮುನ್ನ BBMP ಅಲರ್ಟ್: ರಸ್ತೆ-ಚರಂಡಿ ಪರಿಶೀಲನೆಗೆ ಸೂಚನೆ.

ರಸ್ತೆ, ಪಾದಚಾರಿ ಮಾರ್ಗಗಳ ಪರಿಶೀಲನೆ.

ಬೆಂಗಳೂರು: ಮುಂಬರುವ ಮಳೆಗಾಲದ ಹಿನ್ನೆಲೆಯಲ್ಲಿ ರಸ್ತೆ, ಚರಂಡಿ ಹಾಗೂ ಪಾದಚಾರಿ ಮಾರ್ಗಗಳ ಸಮಗ್ರ ಪರಿಶೀಲನೆ ನಡೆಸಿ ಯಾವುದೇ ತೊಂದರೆಗಳು ಉಂಟಾಗದಂತೆ ಮುಂಚಿತವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ರವರು ತಿಳಿಸಿದರು.

ಮುಂಬರುವ ಮಳೆಗಾಲದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ರಸ್ತೆ ಸುವ್ಯವಸ್ಥೆ, ರಾಜಕಾಲುವೆ ಹಾಗೂ ಚರಂಡಿಗಳ ನಿರ್ವಹಣೆ ಮತ್ತು GAIL ಹಾಗೂ GAIL Gas ಪೈಪ್‌ಲೈನ್ ಅಳವಡಿಕೆ ಕಾಮಗಾರಿಗಳ ಕುರಿತು ಕಾಮಗಾರಿ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಅವರು ಸೂಚಿಸಿದರು.

ಮಳೆಗಾಲದ ಸಂದರ್ಭದಲ್ಲಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುಂಚಿತವಾಗಿ ಅಗತ್ಯ ಕ್ರಮಗಳನ್ನು ಕೈಗೊಂಡು, ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಳೆ ನೀರು ನಿಲ್ಲದೆ ಸರಾಗವಾಗಿ ಹರಿದುಹೋಗುವಂತೆ ಸೂಕ್ತ ವ್ಯವಸ್ಥೆ ಮಾಡಬೇಕು. ಯಾವುದೇ ಪ್ರದೇಶದಲ್ಲಿ ಪ್ರವಾಹ ಉಂಟಾಗದಂತೆ ವಿಶೇಷ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜಕಾಲುವೆ ಹಾಗೂ ಚರಂಡಿಗಳಲ್ಲಿ ನೀರಿನ ಹರಿವಿಗೆ ಅಡ್ಡಿಯಾಗುವ ಹೂಳು ಮತ್ತು ತ್ಯಾಜ್ಯಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಸಭೆಯಲ್ಲಿ ಮುಖ್ಯ ಅಭಿಯಂತರರಾದ ಸ್ವಯಂಪ್ರಭಾ ಹಾಗೂ ವಿಶ್ವನಾಥ್, ಅಧೀಕ್ಷಕ ಅಭಿಯಂತರರು, ವಿವಿಧ ವಿಭಾಗಗಳ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *