ಬೆಂಗಳೂರು: ಶನಿವಾರ ನಗರ್ತಪೇಟೆಯಲ್ಲಿ ಸಂಭವಿಸಿರುವ ಘೋರ ಅಗ್ನಿ ದುರಂತ ಐವರನ್ನ ಬಲಿ ಪಡೆದಿದೆ. ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಇಲ್ಲಿ ಅವೈಜ್ಞಾನಿಕವಾಗಿ ಕಟ್ಟಡಗಳನ್ನು ಕಟ್ಟಿದ್ದಾರೆ. ಅನಧಿಕೃತ ಕಟ್ಟಡಗಳಿಗೆ ನೋಟಿಸ್ ನೀಡುವಂತೆ ಬಿಬಿಎಂಪಿ ಸೂಚನೆ ನೀಡಿದ್ದು, ಅಕ್ರಮವಾಗಿ ಕಟ್ಟಡ ನಿರ್ಮಿಸಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ನಗರ್ತಪೇಟೆಯ ಕಟ್ಟಡ ಒಂದರಲ್ಲಿ ಶನಿವಾರ ಘೋರ ಘಟನೆ ನಡೆದು ಹೋಗಿದೆ. ಬೆಂಕಿ ಅವಘಡ ಸಂಭವಿಸಿ ಐವರು ಮೃತಪಟ್ಟಿದ್ದಾರೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ದುರಂತದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಕಟ್ಟಡ ಮಾಲೀಕರಿಗೆ ಖಡಕ್ ಎಚ್ಚರಿಕೆ ಕೂಡ ನೀಡಿದ್ದಾರೆ.
ಈ ಪರಿಸ್ಥಿತಿಗೆ ಸಾರ್ವಜನಿಕರನ್ನೇ ದೂರಬೇಕು: ಡಿ.ಕೆ.ಶಿವಕುಮಾರ್
ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅಗ್ನಿ ಅವಘಡ ಸಂಭವಿಸಿದ ಕಟ್ಟಡ ಪರಿಶೀಲನೆ ಮಾಡಿದರು. ದುರಂತ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ರವಾಗಿ ಈ ಕಟ್ಟಡ ಕಟ್ಟಲಾಗಿದೆ. ಈ ಪರಿಸ್ಥಿತಿಗೆ ನಮ್ಮ ಸಾರ್ವಜನಿಕರನ್ನೇ ದೂರಬೇಕು ಎಂದಿದ್ದಾರೆ.
For More Updates Join our WhatsApp Group :