ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ.
ದಾವಣಗೆರೆ : ಹಾಸನದಿಂದ ಚಿಕ್ಕೋಡಿಗೆ ‘ಪವರ್ ಕೂಲ್’ ಬಿಯರ್ ಟಿನ್ ಬಾಕ್ಸ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಬಳಿ ನಡೆದಿದೆ. ರಾಜ್ಯ ಹೆದ್ದಾರಿಯ ಪಕ್ಕದಲ್ಲಿದ್ದ ಸೇತುವೆಗೆ ಡಿಕ್ಕಿ ಹೊಡೆದ ಲಾರಿ, ಪಕ್ಕದ ಅಡಿಕೆ ತೋಟಕ್ಕೆ ಉರುಳಿ ಬಿದ್ದಿದೆ. ಅಪಘಾತದ ಭೀಕರತೆಗೆ ಲಾರಿಯಲ್ಲಿದ್ದ ಸಾವಿರಾರು ಬಿಯರ್ ಟಿನ್‌ಗಳು ತೋಟದಾದ್ಯಂತ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಸುರಕ್ಷಿತವಾಗಿದ್ದ ಬಾಟಲಿಗಳನ್ನು ಮತ್ತೊಂದು ಲಾರಿಗೆ ವರ್ಗಾಯಿಸಿದರು. ಕತ್ತಲೆಯ ಲಾಭ ಪಡೆದು ಸ್ಥಳೀಯರು ಕೆಲ ಬಿಯರ್ ಬಾಕ್ಸ್‌ಗಳನ್ನು ಹೊತ್ತೊಯ್ದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
For More Updates Join our WhatsApp Group :




