BSF​ನಲ್ಲಿಹುದ್ದೆ : ಅರ್ಜಿ ಸಲ್ಲಿಸುವುದು ಹೇಗೆ..?

ಗಡಿ ಭದ್ರತಾ ಪಡೆಯಲ್ಲಿನ 1526 ಸಹಾಯಕ ಸಬ್​ ಇನ್ಸ್​​ಪೆಕ್ಟರ್​ (ಮಿನಿಸ್ಟ್ರಿಯಲ್​) ಮತ್ತು ಹೆಡ್​ ಕಾನ್ಸ್​ಟೇಬಲ್ (ಕ್ಲರ್ಕ್​)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 243 ಸಹಾಯಕ ಸಬ್​ ಇನ್ಸ್​ಪೆಕ್ಟರ್​ ಮತ್ತು ವಾರೆಂಟ್​ ಆಫೀಸರ್​, 1283 ಹೆಡ್​​ ಕಾನ್ಸ್​ಟೇಬಲ್​​ ಮತ್ತು ಹವೀಲ್ದಾರ್​ (ಕ್ಲರ್ಕ್​) ಹುದ್ದೆಗಳ ನೇಮಕಾತಿ ನಡೆಯಲಿದೆ.

ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಕ್ಲರ್ಕ್​ ಹುದ್ದೆಗಳ ನೇಮಕಾತಿ ಹಿನ್ನೆಲೆ ಅಭ್ಯರ್ಥಿಗಳು ಟೈಪಿಂಗ್​ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ 25 ವರ್ಷ.

ಅಭ್ಯರ್ಥಿಗಳನ್ನು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಲಿಖಿತ ಪರೀಕ್ಷೆ, ದೈಹಿಕ ದಾರ್ಢ್ಯತೆ, ಕೌಶಲ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಜೂನ್​ 9ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 8 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು rectt.bsf.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

Leave a Reply

Your email address will not be published. Required fields are marked *