ಬೆಳಗಾವಿ || ಬೆಳಗಾವಿ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ದಿನ ನಿಗದಿ – ಮಾ.15ಕ್ಕೆ ಎಲೆಕ್ಷನ್

ಬೆಳಗಾವಿ || ಬೆಳಗಾವಿ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ದಿನ ನಿಗದಿ – ಮಾ.15ಕ್ಕೆ ಎಲೆಕ್ಷನ್

ಬೆಳಗಾವಿ: ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ (Belagavi) ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮಾ. 15ರಂದು ಚುನಾವಣೆ ನಡೆಯಲಿದೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಮಾ. 15ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯ ವೇಳೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಮೇಯರ್ ಸ್ಥಾನಕ್ಕೆ ಸಾಮಾನ್ಯ ಪುರುಷ ಹಾಗೂ ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಇರುತ್ತದೆ.

ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರ ಮಧ್ಯೆ ರಾಜಕೀಯ ಕುಸ್ತಿಗೆ ಮೇಯರ್, ಉಪಮೇಯರ್ ಚುನಾವಣೆ ಸಾಕ್ಷಿಯಗಲಿದೆ ಎನ್ನುವ ಲೆಕ್ಕಾಚಾರಗಳು ಬೆಳಗಾವಿಯಲ್ಲಿ ಕೇಳಿಬರುತ್ತಿದೆ. ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿ ಶಾಸಕ ಅಭಯ್ ಪಾಟೀಲ್ ಪ್ರತಿಷ್ಠೆಯ ಕಣವಾಗಿ ಈ ಚುನಾವಣೆ ಮಾರ್ಪಟ್ಟಿದೆ.

ಇಬ್ಬರು ಸದಸ್ಯರ ಸದಸ್ಯತ್ವ ರದ್ದಾದರೂ ಸಹ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಆದರೆ ವಿಜಯಪುರ ಮಾದರಿಯಲ್ಲಿ ಕಾಂಗ್ರೆಸ್ ಸಂಖ್ಯಾಬಲ ಹೆಚ್ಚಿಸಿಕೊಂಡರೆ ಅಚ್ಚರಿ ಫಲಿತಾಂಶ ಖಚಿತ ಎನ್ನುತ್ತಿದ್ದಾರೆ. ಇಬ್ಬರು ಸದಸ್ಯರ ಸದಸ್ಯತ್ವ ರದ್ದಾಗಿರುವುದರಿಂದ ಪಾಲಿಕೆಯ ಒಟ್ಟು ಸಂಖ್ಯಾ ಬಲ 56ಕ್ಕೆ ಕುಸಿದಿದೆ.

ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಶಾಸಕರು, ಸಂಸದರು, ಪರಿಷತ್ ಸದಸ್ಯರು ಮತದಾನ ಮಾಡುವ ಹಕ್ಕು ಹೊಂದಿರುತ್ತಾರೆ. ನಾಗರಾಜ್ ಯಾದವ್ ಜಿಲ್ಲೆಯ ಕೆಡಿಪಿ ಸಭೆಯಲ್ಲಿ ನಿರಂತರವಾಗಿ ಪಾಲ್ಗೊಳುತ್ತಿದ್ದಾರೆ. ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣ ಸಂದರ್ಭ ಉಮಾಶ್ರೀ ಸಹ ಬೆಳಗಾವಿಯಲ್ಲಿ ಕಾಣಿಸಿಕೊಂಡಿದ್ದರು. ಇನ್ನು ಪಕ್ಷೇತರ ಎಂಎಲ್‌ಸಿ ಲಖನ್ ಜಾರಕಿಹೊಳಿ ಬೆಳಗಾವಿಯನ್ನು ಪ್ರತಿನಿಧಿಸುತ್ತಾರೆ

Leave a Reply

Your email address will not be published. Required fields are marked *