ಬೆಳಗಾವಿ : ನಿಪ್ಪಾಣಿ ಕ್ಷೇತ್ರದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಇಂದು ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ 70ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ.

ಬಹು ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ತಡರಾತ್ರಿ 2 ಗಂಟೆ ಸುಮಾರಿಗೆ ಕೆ.ಎಲ್.ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜ್ಯ ಕಾಂಗ್ರೆಸ್ನ ಹಿರಿಯ ರಾಜಕಾರಣಿ ಕಾಕಾ ಸಾಹೇಬ್ ಪಾಟೀಲ್ ನಿಧನ ಸುದ್ದಿ ಕೇಳಿ ಕಾರ್ಯಕರ್ತರು ಆಘಾತಗೊಂಡಿದ್ದಾರೆ. ಹಲವು ರಾಜಕೀಯ ಮಿತ್ರರು ಸಂತಾಪ ಸೂಚಿಸಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನ ಕಾಕಾ ಸಾಹೇಬ್ ಪಾಟೀಲ್ ಅಗಲಿದ್ದಾರೆ.
ಕಾಂಗ್ರೆಸ್ ನಾಯಕರಾಗಿದ್ದ ಕಾಕಾ ಸಾಹೇಬ್ ಪಾಟೀಲ್ 1999 ರಿಂದ 2013ರ ವರೆಗೂ ಸತತವಾಗಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ನಿಪ್ಪಾಣಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿದ್ದರು. ಕಾಕಾ ಸಾಹೇಬ್ ಪಾಟೀಲ್ ಸಜ್ಜನ ರಾಜಕಾರಣಿ ಆಗಿದ್ದು, ನಿಪ್ಪಾಣಿಯಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರು ಹೊಂದಿದ್ರು. ಕಾಕಾ ಸಾಹೇಬ್ ಪಾಟೀಲ್ ನಿಧನ ಸುದ್ದಿ ಕೇಳಿ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ. ಅಲ್ಲದೇ ಕಾಂಗ್ರೆಸ್ ಹಿರಿಯ ನಾಯಕ ಕಾಕಾ ಸಾಹೇಬ್ ಪಾಟೀಲ್ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.