ಬೆಳಗಾವಿ || ಬೆಳಗಾವಿ ಸುವರ್ಣಸೌಧ ಮುಂದೆ ಗಾಂಧೀಜಿ ಪ್ರತಿಮೆ ಅನಾವರಣ

ಬೆಳಗಾವಿ || ಬೆಳಗಾವಿ ಸುವರ್ಣಸೌಧ ಮುಂದೆ ಗಾಂಧೀಜಿ ಪ್ರತಿಮೆ ಅನಾವರಣ

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಬೃಹದಾಕಾರದ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಅನಾವರಣಗೊಂಡಿತು.

25 ಅಡಿ ಎತ್ತರದ ಬಾಪೂಜಿ ಪುತ್ಥಳಿಯನ್ನು ಚರಕ ನೇಯ್ಯುವ ಮೂಲಕ ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದರು. ಗಾಂಧೀಜಿ ಪ್ರತಿಮೆ ಉದ್ಘಾಟನೆ ಆಗುತ್ತಿದ್ದಂತೆ ಇತ್ತ ಸುವರ್ಣಸೌಧದ ಮುಂಭಾಗದಲ್ಲಿ ಸಿಡಿಮದ್ದುಗಳನ್ನು ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ನನ್ನ ಜೀವನವೇ ನನ್ನ ಸಂದೇಶ ಎಂದು ಸಾರುವ ಗಾಂಧೀಜಿ ಮೂರ್ತಿ ಇಡೀ ದೇಶಕ್ಕೆ ಗೌರವ. ಇಡೀ ಜಗತ್ತು ಗಾಂಧೀಜಿ ಅವರನ್ನು ಗೌರವಿಸುತ್ತದೆ. ಬೆಳಗಾವಿ ಇಡೀ ದೇಶಕ್ಕೆ ಗೌರವ ತಂದುಕೊಡುವ ಸ್ಥಳ. ಯಾಕೆಂದರೆ ಗಾಂಧೀಜಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಬೆಳಗಾವಿಯಲ್ಲಿ ಮಾತ್ರ. ಅಂತಹ ಮಹಾತ್ಮನ ಪುತ್ಥಳಿ ಉದ್ಘಾಟನೆ ನನ್ನ ಕೈಯಿಂದ ಆಗಿದ್ದಕ್ಕೆ ನನ್ನ ಜೀವನ ಧನ್ಯವಾಯಿತು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಣದೀಪ ಸಿಂಗ್ ಸುರ್ಜೇವಾಲ, ಸಚಿವರಾದ ಹೆಚ್.ಕೆ. ಪಾಟೀಲ, ಡಾ. ಜಿ. ಪರಮೇಶ್ವರ, ಸತೀಶ ಜಾರಕಿಹೊಳಿ ಸೇರಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *