ಬೆಳಗಾವಿ ಸಿದ್ದೇಶ್ವರ ಜಾತ್ರೆ: ಮನೆ ಮುಂದೆ ಕುಣಿದವರಿಗೆ ಬರ್ಬರ ಹ*.

ಬೆಳಗಾವಿ ಸಿದ್ದೇಶ್ವರ ಜಾತ್ರೆ: ಮನೆ ಮುಂದೆ ಕುಣಿದವರಿಗೆ ಬರ್ಬರ ಹ*.

ಗಾಯದೊಳಗಿನ ವೈಷಮ್ಯ, 8 ಬಂಧಿತರು.

ಬೆಳಗಾವಿ : ಸಿದ್ದೇಶ್ವರ ಜಾತ್ರೆಯಲ್ಲಿ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಕೊಲೆ ನಡೆದಿರುವಂತಹ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿಯಲ್ಲಿ ನಡೆದಿದೆ. ಸಂಗನಗೌಡ(50) ಕೊಲೆಯಾದ ವ್ಯಕ್ತಿ. ಪ್ರಕರಣ ಸಂಬಂಧ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಘಟನೆ ಸಂಬಂಧ ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಸಂಗನಗೌಡ ಮತ್ತು ಆರೋಪಿಗಳ ಎರಡು ಕುಟುಂಬಗಳ ಮಧ್ಯೆ ಕೆಲವು ವರ್ಷಗಳಿಂದ ವೈಷಮ್ಯ ಇತ್ತು. ಸಿದ್ದೇಶ್ವರ ಜಾತ್ರೆ ವೇಳೆ ರಾಜಕೀಯ ವಿರೋಧಿಗಳ ಮನೆ ಮುಂದೆ ಸಂಗನಗೌಡ ಪಾಟೀಲ್ ಕುಣಿಯುತ್ತಿದ್ದ. ಈ ವೇಳೆ ಮನೆಯ ಮುಂದೆ ಕುಣಿಯಬೇಡ ಎಂದು ಆರೋಪಿಗಳು ಹೇಳಿದ್ದಾರೆ. ಈ ನಡುವೆ ಗಲಾಟೆ ನಡೆದಿದ್ದು, ಬಳಿಕ ಕೊಲೆಗೈಯಲಾಗಿದೆ. ಕುಡಗೋಲು, ಕೊಡಲಿ, ಕಬ್ಬಿಣದ ರಾಡ್ ನಿಂದು ಹೊಡೆದು ಹತ್ಯೆ ಮಾಡಲಾಗಿದೆ.

ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಂಗನಗೌಡ ಪಾಟೀಲ್ ಮೃತಪಟ್ಟಿದ್ದಾರೆ. ದೇಮಪ್ಪ ಬಳಗನ್ನವರ, ಮಂಜುನಾಥ ಬಳಗನ್ನವರ, ರುದ್ರಪ್ಪ, ವಿಜಯ್, ಸೂರಪ್ಪ, ಸಿದ್ದಪ್ಪ, ನಾಗರಾಜ,‌ ಬಸವಂತಪ್ಪ ಬಂಧಿತ ಆರೋಪಿಗಳು.

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಚಾಲಕ ದುರ್ಮರಣ

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಲಾರಿ ಚಾಲಕ ದುರ್ಮರಣ ಹೊಂದಿರುವಂತಹ ಘಟನೆ ಮೈಸೂರು ರಸ್ತೆ ಸಾಟ್​​ಲೈಟ್​ ಬಸ್ ನಿಲ್ದಾಣದ ಸಿಗ್ನಲ್​ನಲ್ಲಿ ನಡೆದಿದೆ. ಸಿಗ್ನಲ್​ನಲ್ಲಿದ್ದ ಲಾರಿಗೆ ಹಿಂಬಂದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ವಿಜಯ್ ಕುಮಾರ್(60) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರಿನಿಂದ ಆರ್​.ಆರ್​.ನಗರಕ್ಕೆ ಲಾರಿ ಬರುತ್ತಿತ್ತು. ಸದ್ಯ ಬ್ಯಾಟರಾಯನಪುರ ಸಂಚಾರಿ ಪೊಲೀಸರು ವಾಹನ ತೆರವು ಮಾಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *