ಬೆಂಗಳೂರು || ಹೊಸ ವರ್ಷಕ್ಕೆ ರಾಜ್ಯಾದ್ಯಂತ ಅದ್ಧೂರಿ ಸ್ವಾಗತ…

ಬೆಂಗಳೂರು || ಹೊಸ ವರ್ಷಕ್ಕೆ ರಾಜ್ಯಾದ್ಯಂತ ಅದ್ಧೂರಿ ಸ್ವಾಗತ...

ಬೆಂಗಳೂರು : ಕರುನಾಡು ಸೇರಿ ಇಡೀ ಜಗತ್ತೇ ಇಂದು 2025ರ ಹೊಸ ವರ್ಷವನ್ನು ಅದ್ಧೂರಿಯಿಂದ ಸ್ವಾಗತಿಸಿ ಸಂಭ್ರಮಿಸಿದೆ. ಸಾವಿರಾರು ಖುಷಿ, ಬೇಸರದ 2024ಕ್ಕೆ ಗುಡ್ ಬೈ ಹೇಳಿ ಕೋಟಿ ಕೋಟಿ ಕನಸಿನ 2025ರ ವರ್ಷಕ್ಕೆ ಹಾಯ್.. ಹಾಯ್ ಎಂದು ಸಂಭ್ರಮದಿಂದ ವೆಲ್ಕಮ್ ಮಾಡಿದೆ. ಬೆಂಗಳೂರು ಸೇರಿ ಹಲವೆಡೆ ಯುವಕ, ಯುವತಿಯರು ರಸ್ತೆಗಳಲ್ಲಿ ಕುಣಿದು ಕುಪ್ಪಳಿಸಿದರು. ಪರಸ್ಪರ ಹೊಸ ವರ್ಷದ ಶುಭಾಶಯ ಕೋರಿದರು. ಹೊಸ ವರ್ಷದ ಸೆಂಟರ್ ಆಫ್ ಅಟ್ರ್ಯಾಕ್ಷನ್ ಕೇಂದ್ರಗಳಾದ ಎಂ.ಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್‍, ಇಂದಿರಾ ನಗರ, ಕೋರಮಂಗಲ ವರ್ಣರಂಜಿತವಾಗಿ ಮಿರಿ ಮಿರಿ ಮಿಂಚುತ್ತಿದ್ದವು.

ಮೊಬೈಲ್‌ಗಳಂತೂ ಫುಲ್‌ ಬ್ಯೂಸಿಯಾಗಿದ್ದವು. ತಮ್ಮ ಆತ್ಮೀಯರಿಗೆ, ಸ್ನೇಹಿತರಿಗೆ, ಹಿರಿಯರಿಗೆ, ಕಿರಿಯರಿಗೆ ಹೊಸ ವರ್ಷದ ಶುಭಾಶಯದ ಸಂದೇಶಗಳನ್ನು ಕಳುಹಿಸುವುದರಲ್ಲಿ ಜನರು ತಲ್ಲಿನರಾಗಿದ್ದರು. ಬಾರ್, ಪಬ್‌ಗಳು ವಿಶೇಷ ಆಫರ್‌ ನೀಡಿದ್ದವು. ಪಾನ ಪ್ರಿಯರು ರಾತ್ರಿಯಿಂದಲೇ ಪಾರ್ಟಿ ಮಾಡುತ್ತಾ ಡಿಜೆ ಹಾಡಿಗೆ ನೃತ್ಯ ಮಾಡುತ್ತಿದ್ದರು. ಇದರಿಂದ ಭರ್ಜರಿ ವ್ಯಾಪಾರವೂ ನಡೆಯಿತು. ಜಿಲ್ಲಾ ಕೇಂದ್ರ ಸ್ಥಳಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಬೇಕರಿಗಳಲ್ಲಿ ಹೊಸ ವರ್ಷದ ಕೇಕ್‌ಗಳಿಗೆ ಭಾರೀ ಬೇಡಿಕೆ ಇತ್ತು. ಬಡಾವಣೆಯ ಜನರು ರಾತ್ರಿ 12 ಗಂಟೆ ಆಗುತ್ತಿದ್ದಂತೆ ರಸ್ತೆಯಲ್ಲಿ ಕೇಕ್‌ ಕತ್ತರಿಸಿ

ಪಟಾಕಿ ಸಿಡಿಸಿ ಹೊಸ ವರ್ಷವನ್ನು ಬರ ಮಾಡಿಕೊಂಡರು.

ಬೆಂಗಳೂರಿನಲ್ಲಿ ಯಾವುದೇ ಅನಾಹುತ ಆಗದಂತೆ ಪೊಲೀಸರು ಟೈಟ್ ಸೆಕ್ಯೂರಿಟಿ ಮಾಡಿಕೊಂಡಿದ್ದರು. ಸಾರ್ವಜನಿಕರ ಎಲ್ಲಾ ಚಲನವಲನ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿವೆ. ಹೊಸ ವರ್ಷಕ್ಕೆ ಕ್ಯಾಲೆಂಡರ್‌ ಬದಲಾ ಗಿದ್ದು ಯಶಸ್ಸಿನ ಕಡೆಗೆ ಗಮನ ಇರಲಿ.

Leave a Reply

Your email address will not be published. Required fields are marked *