ಬೆಂಗಳೂರು: ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ

ಹಳದಿ ಮಾರ್ಗದ ಹಳಿಗೆ ಬರಲು ಸಜ್ಜಾಗಿವೆ ಮೆಟ್ರೋ ರೈಲುಗಳು: ಹೊಸ ವರ್ಷಕ್ಕೆ ಹಳದಿ ಮಾರ್ಗದಲ್ಲಿ ವಾಣಿಜ್ಯ ಸಂಚಾರ ನಿರೀಕ್ಷೆ

ಬೆಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ 34 ವರ್ಷದ ಯುವಕನೊಬ್ಬ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದ ವೇಳೆ ಟ್ರ್ಯಾಕ್ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಪ್ಲಾಟ್‌ಫಾರ್ಮ್‌ನಲ್ಲಿದ್ದ ತುರ್ತು ಟ್ರಿಪ್ ಸಿಸ್ಟಮ್ ಬಟನ್ ಅನ್ನು ತ್ವರಿತವಾಗಿ ಬಳಸಿದ್ದರಿಂದ ಅದೃಷ್ಟವಶಾತ್ ಯುವಕ ಪ್ರಾಣಾಪಾಯಿಂದ ಪಾರಾಗಿದ್ದಾನೆ. ಆದರೆ ಆತನ ತಲೆಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯಿಂದ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ 33 ನಿಮಿಷಗಳ ಕಾಲ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿತ್ತು.

ಇದು 2024 ರಲ್ಲಿ ಮೆಟ್ರೋ ಟ್ರ್ಯಾಕ್‌ಗಳಲ್ಲಿ ನಡೆದ ಮೂರನೇ ಆತ್ಮಹತ್ಯೆ ಯತ್ನ ಪ್ರಕರಣವಾಗಿದೆ ಮತ್ತು ಒಬ್ಬ ವ್ಯಕ್ತಿ ಪ್ರಾಣವನ್ನು ಕಳೆದುಕೊಂಡಿದ್ದಾನೆ.

Leave a Reply

Your email address will not be published. Required fields are marked *