ಬೆಂಗಳೂರು || ಡಿ.ಕೆ ಶಿವಕುಮಾರ್ ಆರ್ಡರ್ಗೆ ಬಿಬಿಎಂಪಿ ಅಧಿಕಾರಿಗಳು “ಅಮುಕು – ಡುಮುಕು”!

ಬೆಂಗಳೂರು || ಡಿ.ಕೆ ಶಿವಕುಮಾರ್ ಆರ್ಡರ್ಗೆ ಬಿಬಿಎಂಪಿ ಅಧಿಕಾರಿಗಳು "ಅಮುಕು - ಡುಮುಕು"!

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಆರ್ಡರ್ಗೆ ಸುಸ್ತಾಗಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ ಶಿವಕುಮಾರ್ ಅವರು ಬಿಬಿಎಂಪಿ ಆಯುಕ್ತರಿಗೆ ಪ್ರಮುಖ ಸೂಚನೆಗಳನ್ನು ನೀಡಿದ್ದು ಈ ಸೂಚನೆಗಳನ್ನು ಅನುಸರಿಸಲು ಬಿಬಿಎಂಪಿ ಅಧಿಕಾರಿಗಳು ಸರ್ಕಸ್ ಮಾಡುತ್ತಿದ್ದಾರೆ. ಈಗಾಗಲೇ ಈ ಸಂಬಂಧ ಮೂರು ಬಾರಿ ದಿನಾಂಕ ಬದಲಾವಣೆ ಮಾಡಲಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.

ಬೆಂಗಳೂರು || ಪನ್ನೀರ್ ಪ್ರಿಯರಿಗೆ ಆಹಾರ ಇಲಾಖೆ ಶಾಕ್: ಡೇಂಜರ್ ಕೆಮಿಕಲ್ ಪತ್ತೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 2025 -2026ನೇ ಸಾಲಿನ ಬಜೆಟ್ ಮಂಡನೆ ಮಾಡುವುದಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಈ ಬಾರಿ ಬಜೆಟ್ ಮೊತ್ತ ಭಾರೀ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಯಾಕೆಂದರೆ ಬಿಬಿಎಂಪಿಗೆ ಈ ಬಾರಿ ಇ ಖಾತಾ ಹಾಗೂ ಆಸ್ತಿ ತೆರಿಗೆ ಸಂಗ್ರಹದಿಂದ ಭರ್ಜರಿ ಆದಾಯ ಸಂಗ್ರಹವಾಗಿದೆ. ಹೀಗಾಗಿ, ಈ ಬಾರಿ ಬಜೆಟ್ನಲ್ಲಿ ಭರ್ಜರಿ ಮೊತ್ತವನ್ನು ವಿವಿಧ ಯೋಜನೆಗಳಿಗೆ ಮೀಸಲಿರಿಸುವ ಸಾಧ್ಯತೆ ಇದೆ.

ಬಿಬಿಎಂಪಿಯ ಬಜೆಟ್ ಈ ಬಾರಿಯೂ ಅಧಿಕಾರಿಗಳ ದರ್ಬಾರ್ನಲ್ಲಿಯೇ ನಡೆಯುತ್ತಿದೆ. ಕಳೆದ ಐದು ವರ್ಷಗಳಿಂದ ಬಿಬಿಎಂಪಿಯ ಚುನಾವಣೆ ನಡೆದಿಲ್ಲ. ಈ 4 ವರ್ಷಗಳಿಂದಲೂ ಅಧಿಕಾರಿಗಳ ನೇತೃತ್ವದಲ್ಲಿಯೇ ಬಜೆಟ್ ಮಂಡನೆ ಮಾಡಲಾಗಿದೆ. ಇದೀಗ ಈ ಬಾರಿಯೂ ಅಧಿಕಾರಿಗಳೇ ಬಿಬಿಎಂಪಿ ಬಜೆಟ್ ಮಂಡನೆ ಮಾಡಲಿದ್ದಾರೆ. ಆದರೆ ಬಿಬಿಎಂಪಿ ಬಜೆಟ್ ಮಂಡನೆ ಮಾಡುವ ದಿನಾಂಕವನ್ನು ಡಿ.ಕೆ ಶಿವಕುಮಾರ್ ಅವರ ನಿರ್ದೇಶನದ ಮೇಲೆ ಮೂರು ಬಾರಿ ಬದಲಾವಣೆ ಮಾಡಲಾಗಿದೆ.

ಡಿ.ಕೆ ಶಿ ಆರ್ಡರ್ ಬದಲಾವಣೆ: ಬಿಬಿಎಂಪಿ ಬಜೆಟ್ನಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳುವಂತೆ ಡಿ.ಕೆ ಶಿವಕುಮಾರ್ ಅವರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಬಜೆಟ್ ದಿನಾಂಕವನ್ನು ಮೂರು ಬಾರಿ ಬದಲಾವಣೆ ಮಾಡಲಾಗಿದೆ ಎನ್ನಲಾಗಿದೆ. ಮೊದಲಿಗೆ ಬಿಬಿಎಂಪಿ ಬಜೆಟ್ ಅನ್ನು ಮಾರ್ಚ್ 27 ಮಂಡನೆ ಮಾಡುವುದಾಗಿ ಹೇಳಲಾಗಿತ್ತು. ನಂತರ 28ಕ್ಕೆ ಮಾಡುವುದಾಗಿ ಬಿಬಿಎಂಪಿ ಹೇಳಿತ್ತು. ಇದೀಗ ಅಂತಿಮವಾಗಿ ಮಾರ್ಚ್ 29ಕ್ಕೆ ಬಜೆಟ್ ಮಂಡನೆ ಮಾಡುವುದಾಗಿ ಹೇಳಿದೆ.

ಬಿಬಿಎಂಪಿ 2025-26ನೇ ಸಾಲಿನ ಆಯವ್ಯಯ ಅಂದಾಜು ಮಂಡನೆ ದಿನಾಂಕವನ್ನು ಮಾರ್ಚ್ 27, 28ರಿಂದ ಇದೀಗ ಮಾರ್ಚ್ 29ಕ್ಕೆ ನಿಗದಿ ಮಾಡಲಾಗಿದೆ. ಬೆಂಗಳೂರಿಗೆ ಭರ್ಜರಿ ಅನುದಾನದ ನಿರೀಕ್ಷೆ ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬಜೆಟ್ನಲ್ಲಿ ಬೆಂಗಳೂರಿಗೆ ಭರ್ಜರಿ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಈ ವರ್ಷ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇರುವುದರಿಂದ ಒಳ್ಳೆಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಸಹ ಸುಳಿವು ನೀಡಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಿಬಿಎಂಪಿಗೆ ನೀಡುತ್ತಿರುವ ಅನುದಾನವನ್ನು 4 ಸಾವಿರ ಕೋಟಿ ರೂಪಾಯಿಯಿಂದ 7 ಸಾವಿರ ಕೋಟಿಗೆ ಹೆಚ್ಚಿಸಿರುವುದಾಗಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಅಲ್ಲದೇ ಈ ಬಾರಿಯ ರಾಜ್ಯ ಸರ್ಕಾರದ ಬಜೆಟ್ನಲ್ಲಿಯೂ ಸಿ.ಎಂ. ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *