ಬೆಂಗಳೂರು : ಬೆಂಗಳೂರಿನ ಆಸ್ತಿದಾರರಿಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಬಿಗ್ ಶಾಕ್ ಹಾಗೂ ವಾರ್ನಿಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಪಾವತಿ ಮಾಡದೆ ಬರೋಬ್ಬರಿ 3 ಲಕ್ಷಕ್ಕೂ ಹೆಚ್ಚು ಆಸ್ತಿದಾರರು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಹೀಗಾಗಿ, ಈ ಆಸ್ತಿದಾರರಿಗೆ ಶಾಕ್ ಕೊಡಲು ರಾಜ್ಯ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಆದರೆ, ಈ ಆಸ್ತಿದಾರರ ಮೇಲೆ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳಲಿದೆ ಎನ್ನುವ ಆತಂಕ ಇದೀಗ ಎದುರಾಗಿದೆ. ಬೆಂಗಳೂರಿನಲ್ಲಿ ಆಸ್ತಿದಾರರ ಮೇಲೆ ಕಠಿಣ ಕ್ರಮಗಳನ್ನು ಬಿಬಿಎಂಪಿ ಈಗಾಗಲೇ ಅನುಸರಿಸುತ್ತಿದೆ. ಈ ನಡುವೆ ಡಿ.ಕೆ ಶಿವಕುಮಾರ್ ಅವರು ವಾರ್ನಿಂಗ್ ಕೊಟ್ಟಿದ್ದಾರೆ.

ಬೆಂಗಳೂರಿನ ಆಸ್ತಿದಾರರಿಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಬಿಗ್ ಶಾಕ್ ಹಾಗೂ ವಾರ್ನಿಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಪಾವತಿ ಮಾಡದೆ ಬರೋಬ್ಬರಿ 3 ಲಕ್ಷಕ್ಕೂ ಹೆಚ್ಚು ಆಸ್ತಿದಾರರು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಹೀಗಾಗಿ, ಈ ಆಸ್ತಿದಾರರಿಗೆ ಶಾಕ್ ಕೊಡಲು ರಾಜ್ಯ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಆದರೆ, ಈ ಆಸ್ತಿದಾರರ ಮೇಲೆ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳಲಿದೆ ಎನ್ನುವ ಆತಂಕ ಇದೀಗ ಎದುರಾಗಿದೆ. ಬೆಂಗಳೂರಿನಲ್ಲಿ ಆಸ್ತಿದಾರರ ಮೇಲೆ ಕಠಿಣ ಕ್ರಮಗಳನ್ನು ಬಿಬಿಎಂಪಿ ಈಗಾಗಲೇ ಅನುಸರಿಸುತ್ತಿದೆ. ಈ ನಡುವೆ ಡಿ.ಕೆ ಶಿವಕುಮಾರ್ ಅವರು ವಾರ್ನಿಂಗ್ ಕೊಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ ಉತ್ತಮ ತೆರಿಗೆ ಸಂಗ್ರಹವಾಗಬೇಕು. ನೀರು, ರಸ್ತೆ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ನೀಡಿದ್ದೇವೆ. ಆದರೆ ಅನೇಕರು ಇದಕ್ಕೆ ತಕ್ಕಂತೆ ತೆರಿಗೆ ಪಾವತಿ ಮಾಡುತ್ತಿಲ್ಲ. ಇಂತಹ ಅಕ್ರಮಗಳನ್ನು ‘ಎಐ’ ತಂತ್ರಜ್ಞಾನದ ಮೂಲಕ ಪತ್ತೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಡಿ.ಕೆ ಶಿವಕುಮಾರ್ ಅವರು ಪುನರ್ಚ್ಚರಿಸಿದ್ದಾರೆ. ಹೌದು ಬೆಂಗಳೂರಿನಲ್ಲಿ ಮೂಲಸೌಕರ್ಯಗಳ ಕೊರತೆಯು ಈ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಬೆಂಗಳೂರಿನ ರಸ್ತೆಗುಂಡಿಗಳ ಸಂಖ್ಯೆ ಹೆಚ್ಚಳವಾಗಿದೆ. ಟ್ರಾಫಿಕ್ ಜಾಮ್ ಸಮಸ್ಯೆ ಮಿತಿಮೀರಿದೆ. ಅಲ್ಲದೇ ಸಾರಿಗೆ ಸೇವೆಗಳ ಬೆಲೆ ಏರಿಕೆ ಹಾಗೂ ವಿವಿಧ ಸೇವೆಗಳ ಮೇಲೆ ಟ್ಯಾಕ್ಸ್ ಹಾಕಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ರೀತಿ ಇರುವಾಗಲೇ ನಾವು ಒಳ್ಳೆಯ ಸೇವೆ ಕೊಡುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಬಾರಿ ಅಂದರೆ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆಸ್ತಿ ತೆರಿಗೆ ಸಂಗ್ರಹ ಗುರಿಯನ್ನು 5,200 ಕೋಟಿ ರೂಪಾಯಿ ಮಾಡಲಾಗಿತ್ತು. ಅದರಲ್ಲಿ ಬಿಬಿಎಂಪಿಯು (ಮಾರ್ಚ್ 30ರ ವರೆಗೆ) ಬರೋಬ್ಬರಿ 4,800 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹ ಮಾಡುವಲ್ಲಿ ಯಶಸ್ವಿಯಾಗಿದೆ. ಆದರೆ ಒಟ್ಟಾರೆ ಎಷ್ಟು ಸಂಗ್ರಹವಾಗಿದೆ ಎನ್ನುವುದನ್ನು ಬಿಬಿಎಂಪಿಯು ಇನ್ನಷ್ಟೇ ಹಂಚಿಕೊಳ್ಳಬೇಕಿದೆ.