ಬೆಂಗಳೂರು || ಬೆಂಗಳೂರು ಎರಡನೇ ವಿಮಾನ ನಿಲ್ದಾಣ: 3 ಶಾರ್ಟ್ ಲಿಸ್ಟ್ ಜಾಗದಲ್ಲಿ ಹೊಸ ಸಮಸ್ಯೆ!

ಬೆಂಗಳೂರು || ಬೆಂಗಳೂರು ಎರಡನೇ ವಿಮಾನ ನಿಲ್ದಾಣ: 3 ಶಾರ್ಟ್ ಲಿಸ್ಟ್ ಜಾಗದಲ್ಲಿ ಹೊಸ ಸಮಸ್ಯೆ!

ಬೆಂಗಳೂರು: ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಚರ್ಚೆ ಜೋರಾಗಿದೆ. ಇದೀಗ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿಗದಿ ಮಾಡಿರುವ ಮೂರು ಜಾಗದಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೂರು ಜಾಗಗಳನ್ನು ಮೊದಲ ಹಂತದಲ್ಲಿ ಶಾರ್ಟ್ಲಿಸ್ಟ್ ಮಾಡಲಾಗಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಸದಸ್ಯರು ಏಪ್ರಿಲ್ ಮೊದಲ ವಾರದಲ್ಲಿ ಬೆಂಗಳೂರಿಗೆ ಬರಲಿದ್ದು, ಈ ಮೂರು ಜಾಗಗಳಲ್ಲಿ ಪರಿಶೀಲನೆ ಮಾಡಲಿದ್ದಾರೆ. ಈ ರೀತಿ ಇರುವಾಗಲೇ ನಿಗದಿ ಮಾಡಿರುವ ಜಾಗದಲ್ಲಿ ಹೊಸ ಸಮಸ್ಯೆ ಎದುರಾಗಿದೆ.

ಕರ್ನಾಟಕದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ನೆಲಮಂಗಲ ಮತ್ತು ಕನಕಪುರ ನಡುವೆ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚರ್ಚೆ ಜೋರಾಗಿದೆ. ಕನಕಪುರದಲ್ಲಿ ಮೂಲಸೌಕರ್ಯ ಉತ್ತಮವಾಗಿದೆ. ಹೀಗಾಗಿ ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಈ ರೀತಿ ಇರುವಾಗಲೇ ಹೊಸ ಸಮಸ್ಯೆಯೊಂದು ಎದುರಾಗಿದೆ.

ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕನಕಪುರ ಹಾಗೂ ನೆಲಮಂಗಲದ ನಡುವೆ ಭಾರೀ ಚರ್ಚೆಗಳು ನಡೆದಿವೆ. ಆದರೆ ಈ ಭಾಗದಲ್ಲಿ ಕೇಂದ್ರ ತಂಡ ಪರಿಶೀಲನೆಗೆ ಬರುವ ಸಂದರ್ಭದಲ್ಲಿಯೇ ಹೊಸ ಸಮಸ್ಯೆಯ ಬಗ್ಗೆ ಚರ್ಚೆ ನಡೆದಿದೆ. ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರವಾಗಿ ಭೂಸ್ವಾಧೀನ ಪ್ರಕ್ರಿಯೆ ಸವಾಲಾಗಿ ಪರಿಣಮಿಸಿದೆ. ಕರ್ನಾಟಕದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಚಾರದಲ್ಲಿ ಪ್ರಾರಂಭಕ್ಕೂ ಮುನ್ನವೇ ಸಮಸ್ಯೆ ಎದುರಾಗಿದೆ. ಅತ್ತ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಆದರೆ ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡುವುದರಿಲ್ಲಿಯೇ ಕರ್ನಾಟಕ ಸರ್ಕಾರವು ವಿಳಂಬ ಧೋರಣೆಯನ್ನು ಅನುಸರಿಸಿತ್ತು. ಇದೀಗ ಜಾಗದ ಸಮಸ್ಯೆ ಎದುರಾಗಿದೆ. ವಿಮಾನ ನಿಲ್ದಾಣಕ್ಕೆ ಶಾರ್ಟ್ ಲಿಸ್ಟ್ ಮಾಡಲಾಗಿರುವ ಎರಡು ಪ್ರಮುಖ ಪ್ರದೇಶಗಳಾದ ನೆಲಮಂಗಲ ಹಾಗೂ ಕನಕಪುರ ಭಾಗವು ಕೃಷಿ ಪ್ರಧಾನ ಭೂಮಿಯಾಗಿದೆ. ಹೀಗಾಗಿ ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಸವಾಲಾಗಲಿದೆ ಎಂದು ಹೇಳಲಾಗುತ್ತಿದೆ. ಈ ಭಾಗದಲ್ಲಿ ಸ್ಥಳೀಯರು ಕೃಷಿಯನ್ನೇ ಪ್ರಧಾನವನ್ನಾಗಿ ಇರಿಸಿಕೊಂಡಿದ್ದಾರೆ. ಹೀಗಾಗಿ, ಭೂಸ್ವಾಧೀನ ಸವಾಲುಗಳು ಎದುರಾಗುತ್ತಿವೆ. ಇನ್ನು ನೆಲಮಂಗಲ ಸಹ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತವಾಗಿದೆಯಾದರೂ ಈ ಭಾಗದಲ್ಲಿ ದೀರ್ಘಕಾಲಿನ ಯೋಜನೆಗಳನ್ನು ರೂಪಿಸಿಕೊಳ್ಳುವ ಅವಶ್ಯಕತೆ ಇದೆ.

2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಿಕೊಳ್ಳಲಾಗಿದೆ. ಅದರಲ್ಲಿ ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ, ಸೋಮನಹಳ್ಳಿ ಹಾಗೂ ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿನ ಒಂದು ಜಾಗ ಸೇರಿದೆ. ಆದರೆ, ಇಲ್ಲಿನ ರೈತರು ಕೃಷಿಯಲ್ಲಿ ತೊಡಗಿಸಿಕೊಂಡಿರುವುದು ಹಾಗೂ ಬೆಂಗಳೂರು ಕನೆಕ್ಟಿವಿಟಿ ಸೇರಿದಂತೆ ಹಲವು ವಿಷಯಗಳು ಕೇಂದ್ರ ತಂಡ ಬರುವುದಕ್ಕಿಂತ ಮುಂಚೆಯೇ ಚರ್ಚೆಯಾಗುತ್ತಿದೆ.

Leave a Reply

Your email address will not be published. Required fields are marked *