ಬೆಂಗಳೂರು : ನ್ಯೂ ಇಯರ್ ಸೆಲೆಬ್ರೇಷನ್ ಗೆ ಕೌಂಟ್ ಡೌನ್ ಆರಂಭವಾಗಿದ್ದು ಹೊಸ ವರ್ಷಕ್ಕೆ BMTC ಯಿಂದ ಹೆಚ್ಚುವರಿ ಬಸ್ ಸೇವೆ ಒದಗಿಸಲಾಗಿದೆ. ಇಂದಿನಿಂದ ಹೆಚ್ಚುವರಿ ಬಸ್ ಗಳ ಸಂಚಾರ ಆರಂಭವಾಗಿದೆ, MG ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗಿದೆ.
ಇಂದು ರಾತ್ರಿ 11 ರಿಂದ ಮಧ್ಯರಾತ್ರಿ 2 ಗಂಟೆಯವರೆಗೆ ಹೆಚ್ಚುವರಿ ಬಿಎಂಟಿಸಿ ಬಸ್ ಗಳ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಬ್ರಿಗೇಡ್ ರಸ್ತೆಯಿಂದ ಎಲೆಕ್ಟ್ರಾನಿಕ್ಸ್ ಸಿಟಿ ಮತ್ತು ಜಿಗಣಿಗೆ, ಎಂ.ಜಿ. ರಸ್ತೆಯಿಂದ ಸರ್ಜಾಪುರ, ಕೆಂಗೇರಿ-ಕೆಎಚ್ಬಿ ಕ್ವಾರ್ಟರ್ಸ್, ಜನಪ್ರಿಯ ಟೌನ್ಶಿಪ್, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಯಲಹಂಕ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿಗೆ ಹೆಚ್ಚುವರಿ ಬಸ್ ಕಲ್ಪಿಸಲಾಗಿದೆ.
ಹೆಚ್ಚು ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ, ಜಂಕ್ಷನ್ಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್. ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ.